Spread the love

ಮಣಿಪಾಲ: ದಿನಾಂಕ :28-06-2025(ಹಾಯ್ ಉಡುಪಿ ನ್ಯೂಸ್) ಶಿವಳ್ಳಿ ಗ್ರಾಮದ ಉದಯವಾಣಿ ಪ್ರೆಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನನ್ನು ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಅವರು ಬಂಧಿಸಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್ ಅವರು ದಿನಾಂಕ:24-06-2025 ರಂದು  ಠಾಣಾ ಸಿಬ್ಬಂದಿಯವರೊಂದಿಗೆ ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳೀ ಗ್ರಾಮದ ಉದಯವಾಣಿ ಪ್ರೆಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ Jitendra Minj (25) ಎಂಬವನು ಅಮಲಿನಲ್ಲಿದ್ದು, ಅವನು ಗಾಂಜಾ ಸೇವಿಸಿರಬಹುದೆಂಬ ಬಗ್ಗೆ ಸಂಶಯವಿದ್ದು ಆತನನ್ನು ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ವೈದ್ಯಕೀಯ ಪರೀಕ್ಷೆಗೆ ಹಾಜರುಪಡಿಸಿದ್ದಾರೆ .

ಆರೋಪಿಯು ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರು ದೃಢಪತ್ರ ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಣಿಪಾಲ ಪೊಲೀಸ ಠಾಣೆಯಲ್ಲಿ  ಕಲಂ: 27(b) NDPS Act ರಂತೆ ಪ್ರಕರಣ ದಾಖಲಾಗಿದೆ.

error: No Copying!