
ದಿನಾಂಕ:28-06-2025(ಹಾಯ್ ಉಡುಪಿ ನ್ಯೂಸ್) ಹೈದರಾಬಾದ್: ಪ್ರಮುಖ ತೆಲುಗು ಚಾನೆಲ್‌ನ 40 ವರ್ಷದ ಪತ್ರಕರ್ತೆ ಮತ್ತು ಸುದ್ದಿ ನಿರೂಪಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಸ್ವೇಚಾ ವಿ ಅವರ ನಿವಾಸದಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಆಕೆಯ ತಂದೆ ನೀಡಿದ ದೂರಿನ ಮೇರೆಗೆ ಆತ್ಮಹತ್ಯೆ ಪ್ರಕರಣ ದಾಖಲಿಸಲಾಗಿದ್ದು, ತಮ್ಮ ಮಗಳ ಸಾವಿಗೆ ಕಾರಣ ಎಂದು ಆರೋಪಿಸಿರುವ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದ್ದಿ ನಿರೂಪಕಿಯ ನಿಧನಕ್ಕೆ ಬಿಆರ್‌ಎಸ್ ಕಾರ್ಯಾಧ್ಯಕ್ಷ ಕೆಟಿ ರಾಮರಾವ್ ಸಂತಾಪ ಸೂಚಿಸಿದ್ದಾರೆ.
‘ಉತ್ತಮ ಪತ್ರಕರ್ತೆ, ಬರಹಗಾರ್ತಿ ಮತ್ತು ಸಮರ್ಪಿತ ತೆಲಂಗಾಣಿಗರ ಸ್ವೇಚ್ಛಾ ವೋತಾರ್ಕರ್ ಅವರ ದುರದೃಷ್ಟಕರ ನಿಧನದ ಬಗ್ಗೆ ಕೇಳಿ ತೀವ್ರ ದುಃಖವಾಯಿತು. ನನಗೆ ಮಾತುಗಳೇ ಸಾಲುತ್ತಿಲ್ಲ’ ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.