
ಮಣಿಪಾಲ: ದಿನಾಂಕ:02-07-2025 (ಹಾಯ್ ಉಡುಪಿ ನ್ಯೂಸ್) ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಮಣಿಪಾಲದ ಈಶ್ವರ ನಗರ ಎಂಬಲ್ಲಿ ಇಂದು ನಡೆದಿದೆ.
ಮೃತರನ್ನು ನಿವೃತ್ತ ನರ್ಸ್ ವಿನೋದ(70) ಎಂದು ಗುರುತಿಸಲಾಗಿದೆ. ಇವರು ಮಗಳ ಮಕ್ಕಳನ್ನು ಶಾಲೆಯ ಬಸ್ಸಿನಿಂದ ಇಳಿಸಿ ಮನೆಗೆ ಬಿಟ್ಟು ಬಂದಿದ್ದು, ಬಳಿಕ ಉಪ್ಪೂರಿಗೆ ಹೋಗಲು ರಸ್ತೆ ಬದಿ ನಿಂತಿದ್ದಾಗ ಮಣಿಪಾಲ ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಖಾಸಗಿ ವೇಗದೂತ ಬಸ್ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಇದರ ಪರಿಣಾಮ ಮಹಿಳೆ ಬಸ್ಸಿನಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರೆಂದು ತಿಳಿದು ಬಂದಿದೆ. ಮಣಿಪಾಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.