Spread the love
  • ಉಡುಪಿ: ದಿನಾಂಕ:04-07-2025(ಹಾಯ್ ಉಡುಪಿ ನ್ಯೂಸ್) ಮಾಧ್ಯಮ ಗಳ ಮುಂದೆ ಧರ್ಮಗಳ ನಡುವೆ ಧ್ವೇಷ ಹುಟ್ಟು ಹಾಕುವ ಹೇಳಿಕೆ ನೀಡಿದ್ದಾರೆ ಎಂದು ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
  • ಉಡುಪಿ ನಗರ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ (ಕಾ ಮತ್ತು ಸು) ಭರತೇಶ್ ಕಂಕಣವಾಡಿ ಅವರು ದಿನಾಂಕ :03-07-2025ರಂದು ಸೋಷಿಯಲ್‌ ಮೀಡಿಯಾವನ್ನು ವೀಕ್ಷಿಸುತ್ತಿದ್ದಾಗ ವಾಟ್ಸಾಪ್‌ ಮುಖಾಂತರ ವಿಡಿಯೋ ಬಂದಿದ್ದು, ವಿಡಿಯೋದಲ್ಲಿ ಶರಣ್‌ ಪಂಪವೆಲ್‌  ಮಾಧ್ಯಮದೊಂದಿಗೆ ಮಾತನಾಡುತ್ತಾ ಕುಂಜಾಲುವಿನಲ್ಲಿ ನಡೆದ ಗೋ ಹತ್ಯೆ ಯನ್ನು ಉದ್ದೇಶಿಸಿ ಸಾರ್ವಜನಿಕವಾಗಿ ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ್ದನು ಎಂದು ದೂರಿನಲ್ಲಿ ದಾಖಲಿಸಿದ್ದಾರೆ.
  • ಆರೋಪಿ ಶರಣ್‌ ಪಂಪ್‌ ವೆಲ್‌ ನೀಡಿದ ಹೇಳಿಕೆ ವಿಡಿಯೋ ವಿವಿಧ ವಾಟ್ಸಪ್‌ ಗ್ರೂಪ್‌ ಗಳಿಗೆ ಹರಿಬಿಟ್ಟಿದ್ದು, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತರುವಂತೆ ಪತ್ರಿಕಾ ಗೋಷ್ಠಿಯಲ್ಲಿ ಪ್ರಕರಣದ ತನಿಖೆಯು ಪೂರ್ಣಗೊಳ್ಳುವ ಮೊದಲೇ ಸಾರ್ವಜನಿಕರಲ್ಲಿ ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರಲ್ಲಿ ಗಲಭೆ-ಗೊಂದಲ ಉಂಟು ಮಾಡುವಂತಿದ್ದು, ಧರ್ಮಗಳ ನಡುವೆ ದ್ವೇಷ ಹುಟ್ಟು ಹಾಕುವಂತಹ ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪಿ ಶರಣ್ ಪಂಪ್ ವೆಲ್ ವಿರುದ್ಧ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ  ದೂರು ದಾಖಲಿಸಿದ್ದಾರೆ.
  • ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಕಲಂ: 353(2) BNS ರಂತೆ ಪ್ರಕರಣ ದಾಖಲಾಗಿದೆ.
error: No Copying!