Spread the love

ದಿನಾಂಕ:04-07-2025(ಹಾಯ್ ಉಡುಪಿ ನ್ಯೂಸ್)

ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿರುವ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಳೆದ ಏಪ್ರಿಲ್‌ನಲ್ಲಿ ಪ್ರಕರಣ ದಾಖಲಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತರಿಗೆ ಸೂಚಿಸಿತ್ತು. ಅದರನ್ವಯ ಎಫ್‌ಐಆರ್‌ ದಾಖಲಿಸಲಾಗಿದೆ. ಈಶ್ವರಪ್ಪ ಜಲಸಂಪನ್ಮೂಲ ಸಚಿವರಾಗಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿರುವುದಾಗಿ ಆರೋಪಿಸಿ ವಕೀಲ ಬಿ.ವಿನೋದ್‌ ಅವರು 2012ರಲ್ಲಿ ಶಿವಮೊಗ್ಗದ ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

error: No Copying!