Spread the love

ಕೋಟ: ಸರಕಾರ ರೂಪಿಸುವ ಎಲ್ಲಾ ಕಾರ್ಯಕ್ರಮಗಳು ಜನಸಾಮಾನ್ಯರ ಬಾಳಿಗೆ ಬೆಳಕು ಚೆಲ್ಲುವ  ಯೋಜನೆಗಳಾಗಿ ರೂಪುಗೊಂಡಿವೆ ಇದಕ್ಕೆ ಪುಷ್ಠಿ ನೀಡುವಂತೆ ನಮ್ಮ ಕ್ಲಿನಿಕ್ ಜನರ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಕಾರ್ಯಕ್ರಮಗಳಾಗಿದೆ ಎಂದು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

ಭಾನುವಾರ  ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಾಲಿಗ್ರಾಮ ಪಟ್ಟಣಪಂಚಾಯತ್ ಆಶ್ರಯದಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆಯಲ್ಲಿ  ನಿರ್ಮಾಣಗೊಂಡ ನಮ್ಮ ಕ್ಲಿನಿಕ್ ಲೋಕಾರ್ಪಣೆಗೊಳಿಸಿ ಮಾತನಾಡಿ  ಸ್ಥಳೀಯ ವ್ಯಾಪ್ತಿಗಳಿಗೆ ಬೇಕಾದ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಜನಸಾಮಾನ್ಯರ ಸಹಕಾರ ಅಗತ್ಯವಾಗಿದೆ ಈ ನಿಟ್ಟಿನಲ್ಲಿ ಸಾಲಿಗ್ರಾಮದ ಪಾರಂಪಳ್ಳಿ ಪರಿಸರಕ್ಕೆ ಈ ಯೋಜನೆ ಸಮರ್ಪವಾಗಿ ಅನುಷ್ಠಾನಗೊಳ್ಳಲಿ ಎಂದರು.

ಸoಸದ ಕೋಟ ಶ್ರೀನಿವಾಸ ಪೂಜಾರಿ ದೀಪ ಬೆಳಗಿಸಿ ಶುಭಹಾರೈಸಿದರು. ಸಭೆಯ ಅಧ್ಯಕ್ಷತೆಯನ್ನು ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಜಿಲ್ಲಾ  ಆರೋಗ್ಯ ಅಧಿಕಾರಿ ಡಾ.ಬಸವರಾಜ ಜಿ.ಹುಬ್ಬಳ್ಳಿ,ಬ್ರಹ್ಮಾವರ ತಾಲೂಕು ಗ್ಯಾರಂಟಿ  ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷೆ ಡಾ.ಸುನಿತಾ ಶೆಟ್ಟಿ,ಪಟ್ಟಣಪಂಚಾಯತ್ ಉಪಾಧ್ಯಕ್ಷೆ ಗಿರಿಜಾ ಪೂಜಾರಿ,ಸ್ಥಾಯಿ ಸಮಿತಿ ಅಧ್ಯಕ್ಷೆ  ಅನುಸೂಯ ಹೇರ್ಳೆ, ವಾರ್ಡ್ ಸದಸ್ಯೆ ರೇಖಾ ಕೇಶವ ಕರ್ಕೇರ,ಆರೋಗ್ಯ ನಿರೀಕ್ಷಕಿ ಮಮತಾ,ಸಾಲಿಗ್ರಾಮ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ರಾಘವೇಂದ್ರ ರಾವ್, ಪಟ್ಟಣಪಂಚಾಯತ್ ಸದಸ್ಯರಾದ ರಾಜು ಪೂಜಾರಿ, ಪುನಿತ್ ಪೂಜಾರಿ, ಸುಲತಾ ಹೆಗ್ಡೆ, ಮುಖ್ಯಾಧಿಕಾರಿ ಅಜೇಯ್ ಭಂಡಾರ್ಕರ್, ನಮ್ಮ ಕ್ಲಿನಿಕ್ ಇದರ  ವೈದ್ಯೆ ಡಾ.ಸುಶ್ಮಿತಾ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗ ಮತ್ತಿತರರು ಉಪಸ್ಥಿತರಿದ್ದರು. ತಾಲೂಕು ಆರೋಗ್ಯ ಅಧಿಕಾರಿ ಡಾ.ವಾಸುದೇವ್ ಪ್ರಾಸ್ತಾವನೆ ಸಲ್ಲಿಸಿದರು. ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಇಲಾಖೆಯ ಮಂಜುನಾಥ್ ಸ್ವಾಗತಿಸಿ ನಿರೂಪಿಸಿದರು.

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಸಾಲಿಗ್ರಾಮ ಪಟ್ಟಣಪಂಚಾಯತ್ ಆಶ್ರಯದಲ್ಲಿ ಸಾಲಿಗ್ರಾಮ ಪಟ್ಟಣಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಪಡುಕರೆಯಲ್ಲಿ  ನಿರ್ಮಾಣಗೊಂಡ ನಮ್ಮ ಕ್ಲಿನಿಕ್ ಅನ್ನು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಲೋಕಾರ್ಪಣೆಗೊಳಿಸಿದರು.ಸಂಸದ ಕೋಟ ಶ್ರೀನಿವಾಸ ಪೂಜಾರಿ,ಸಾಲಿಗ್ರಾಮ ಪಟ್ಟಣಪಂಚಾಯತ್ ಅಧ್ಯಕ್ಷೆ ಸುಕನ್ಯಾ ಶೆಟ್ಟಿ,ಜಿಲ್ಲಾ  ಆರೋಗ್ಯ ಅಧಿಕಾರಿ ಡಾ.ಬಸವರಾಜ ಜಿ.ಹುಬ್ಬಳ್ಳಿ ಮತ್ತಿತರರು ಇದ್ದರು.

error: No Copying!