Spread the love

ದಿನಾಂಕ:11-07-2025(ಹಾಯ್ ಉಡುಪಿ ನ್ಯೂಸ್)


ಬೆಂಗಳೂರು : ಬಿಜೆಪಿಯ ಮಾತೃ ಸಂಘಟನೆ ಎಂದು ಗುರುತಿಸಿಕೊಂಡಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. 75ವರ್ಷ ವಯಸ್ಸಾದವರು ಇತರರಿಗೆ ಅವಕಾಶ ಮಾಡಿಕೊಡಬೇಕು ಎಂದು ಮೋಹನ್ ಭಾಗವತ್ ಹೇಳಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಈ ವರ್ಷದ ಕೊನೆಯಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಅನುಮಾನ ಹುಟ್ಟಿಸಿದೆ. ಪ್ರಧಾನಿ ಮೋದಿ ಅವರ ವಯಸ್ಸಿನ ಮೇಲೆ ಕೇಂದ್ರೀಕರಿಸಬಾರದು. ಬದಲಿಗೆ ಅವರು ದೇಶಕ್ಕೆ ನೀಡಿದ ಕೊಡುಗೆಗಳ ಮೇಲೆ ಕೇಂದ್ರೀಕರಿಸಬೇಕು ಎಂದಿದ್ದಾರೆ.
ರಾಜಕಾರಣಿಗಳಿಗೆ 75 ವರ್ಷ ವಯೋಮಿತಿಯನ್ನು ಸ್ವತಃ ಪ್ರಧಾನಿ ಮೋದಿ ಅವರೇ ಹೇಳಿದ್ದಾರೆ. ಹಾಗಾಗೀ ಅವರು ಒಂದೆರಡು ತಿಂಗಳಲ್ಲಿ 75 ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರಾ? ಎಂಬುದು ಜನರ ಊಹೆಯಾಗಿದೆ ಎಂದು ಹೇಳಿದ್ದಾರೆ.ನಾವು ಪ್ರಧಾನಿಯನ್ನು ಗುರಿಯಾಗಿಸಿಕೊಂಡಿಲ್ಲ. ನಮಗೆ ಪ್ರಧಾನಿ ವಯಸ್ಸಿನ ಬಗ್ಗೆ ಆಸಕ್ತಿ ಇಲ್ಲ, ದೇಶಕ್ಕೆ ಅವರು ನೀಡಿರುವ ಕೊಡುಗೆ ಮತ್ತು ಕೆಲಸದ ಬಗ್ಗೆ ಆಸಕ್ತಿಯಿದೆ. ಆದರೆ ಈ ಹಿಂದೆ ರಾಜಕಾರಣಿಗಳಿಗೆ 75 ವರ್ಷ ವಯೋಮಿತಿ ಎಂದು ಮೋದಿ ಅವರೇ ಹೇಳಿದ್ದರು. ಒಂದೆರಡು ತಿಂಗಳಲ್ಲಿ 75 ನೇ ವರ್ಷಕ್ಕೆ ಕಾಲಿಡುತ್ತಿರುವುದರಿಂದ ಅವರನ್ನು ಮಾರ್ಗದರ್ಶಕ ಮಂಡಳಿಗೆ ಕಳುಹಿಸುತ್ತಾರೆಯೇ ಎಂಬುದು ಜನರಲ್ಲಿ ಅನುಮಾನಕ್ಕೆ ಕಾರಣವಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.ಈ ಮಧ್ಯೆ ಮಾತನಾಡಿದ ಕಾಂಗ್ರೆಸ್ ಎಂಎಲ್ ಸಿ ಬಿ.ಕೆ. ಹರಿಪ್ರಸಾದ್,, ಬಹುಶಃ ಪ್ರಧಾನಿ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ಕೆಳಗಿಳಿಸುವ ಸುಳಿವನ್ನು ಮೋಹನ್ ಭಾಗವತ್ ನೀಡಿದ್ದಾರೆ. ಬಿಜೆಪಿ ಆರೆಸ್ಸೆಸ್‌ನ ರಾಜಕೀಯ ವಿಭಾಗವಾಗಿದೆ. ಆರ್‌ಎಸ್‌ಎಸ್ ತೆಗೆದುಕೊಳ್ಳುವ ನಿರ್ಧಾರಗಳನ್ನು ಅದು ಅನುಸರಿಸಬೇಕಾಗುತ್ತದೆ ಎಂದು ಹೇಳಿದರು.

error: No Copying!