
ದಿನಾಂಕ:15-07-2025(ಹಾಯ್ ಉಡುಪಿ ನ್ಯೂಸ್)
ಚನ್ನಪಟ್ಟಣ:ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರ ಅಂತ್ಯಕ್ರಿಯೆ ಇಂದು ಚನ್ನಪಟ್ಟಣದ ದಶವಾರದಲ್ಲಿರುವ ಜಮೀನಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಒಕ್ಕಲಿಗ ಸಂಪ್ರದಾಯದಂತೆ ನಡೆಯಿತು. ಸರೋಜಾದೇವಿ ಅವರ ಪುತ್ರ ಗೌತಮ್ ಅವರು ಅಂತಿಮ ವಿಧಿ ವಿಧಾನಗಳನ್ನು ಪೂರೈಸಿದರು. ಇದಕ್ಕೂ ಮುನ್ನ ಪೊಲೀಸರು ಕುಶಾಲ ತೋಪು ಸಿಡಿಸುವ ಮೂಲಕ ಗೌರವ ಸಲ್ಲಿಸಲಾಯಿತು. ಅಂತ್ಯಸಂಸ್ಕಾರಕ್ಕೂ ಮುನ್ನ ಅವರ ಪಾರ್ಥೀವ ಶರೀರವನ್ನು ಬೆಂಗಳೂರಿನಿಂದ ಮೆರವಣಿಗೆ ಮೂಲಕ ತರಲಾಯಿತು. ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರೋಜಾ ದೇವಿಯವರ ಅಂತಿಮ ದರ್ಶನ ಪಡೆದು, ಸರೋಜಾ ದೇವಿಯವರ ನಿಧನ ಚಿತ್ರರಂಗಕ್ಕೆ ಆಘಾತವನ್ನುಂಟುಮಾಡಿದೆ. ಅವರ ನಿವಾಸವಿರುವ ಮಲ್ಲೇಶ್ವರದ 11ನೇ ಕ್ರಾಸಿಗೆ ಸರೋಜಾ ದೇವಿ ಹೆಸರಿಡಲು ಬಿಬಿಎಂಪಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದರು.
