
ಉಡುಪಿ: ದಿನಾಂಕ:23-07-2025(ಹಾಯ್ ಉಡುಪಿ ನ್ಯೂಸ್) ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ (ಪ್ರವೀಣ್ ಶೆಟ್ಟಿ ಬಣ)ದ ಉಡುಪಿ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಪದಾಧಿಕಾರಿಗಳು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ ಬಿಳಿಮಲೆ ಅವರಿಗೆ ಹೂಗುಚ್ಛ ನೀಡಿ ಜಿಲ್ಲೆಗೆ ಸ್ವಾಗತಿಸಿ ಗೌರವಿಸಿದರು.
ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲೆ (ಪ್ರವೀಣ್ ಶೆಟ್ಟಿ ಬಣ)ದ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ ಹಾಗೂ ಪದಾಧಿಕಾರಿಗಳು ದಿನಾಂಕ 22.07.2025 ರಂದು ಉಡುಪಿಯ ಸರಕಾರಿ ಪ್ರವಾಸಿ ಮಂದಿರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ್ ಬಿಳಿಮಲೆಯವರನ್ನು ಭೇಟಿ ಮಾಡಿ ಅಭಿನಂದಿಸಿ ಹೂ ಗುಚ್ಚ ನೀಡಿ ಸ್ವಾಗತಿಸಿದರು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುರುಷೋತ್ತಮ್ ಬಿಳಿಮಲೆ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕನ್ನಡಪರ ಸಂಘಟನೆ ಹಾಗೂ ಹೋರಾಟಗಾರರೊಂದಿಗೆ ಸಭೆಯಲ್ಲಿ ಕ.ರ.ವೇ ಪದಾಧಿಕಾರಿಗಳು ಭಾಗವಹಿಸಿದರು.
ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿ, ಮಹಿಳಾ ಜಿಲ್ಲಾಧ್ಯಕ್ಷರಾದ ಜ್ಯೋತಿ ಸೇರಿಗಾರ್, ಪ್ರಧಾನ ಕಾರ್ಯದರ್ಶಿ ಅನುಷಾ ಆಚಾರ್ ಪಳ್ಳಿ, ಮಹಿಳಾ ಉಪಾಧ್ಯಕ್ಷರಾದ ದೇವಕಿ ಬಾರ್ಕೂರ್, ಜಯಪ್ರಕಾಶ್ ಶೆಟ್ಟಿ.ಅಲ್ಫೋನ್ಸ್ ಮಿನೇಜಸ್, ಸಂಘಟನೆಯ ಪ್ರಮುಖರಾದ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಸಂತೋಷ್ ಕುಲಾಲ್, ಆಶಾ, ಮೋಹಿನಿ, ಪವಿತ್ರ ಶೆಟ್ಟಿ, ಮುಕ್ತ, ಚಂದ್ರಕಲಾ, ಸರೋಜಿನಿ ಮೊದಲಾದವರು ಉಪಸ್ಥಿತರಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
