ಹುಬ್ಬಳ್ಳಿ: ಮಾ20(ಹಾಯ್ ಉಡುಪಿ ನ್ಯೂಸ್) ಹುಬ್ಬಳ್ಳಿ ಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಸಿದ್ಧವಾಗಿದೆ. ಚುನಾವಣೆ ಗೆ ಕಾಂಗ್ರೆಸ್ ಪಕ್ಷ ತಯಾರಿ ನಡೆಸುತ್ತಲೇ ಇರುತ್ತದೆ ಎಂದರು
ನಾಲ್ಕು ರಾಜ್ಯಗಳಲ್ಲಿ ಗೆದ್ದಿರುವ ಬಿಜೆಪಿಯವರು ಕರ್ನಾಟಕದಲ್ಲೂ ಗೆಲ್ಲುತ್ತದೆ ಎಂಬ ಭ್ರಮೆಯಲ್ಲಿದ್ದಾರೆ. ಬಿಜೆಪಿಯವರು ಕರ್ನಾಟಕದಲ್ಲಿ ಆಪರೇಷನ್ ಕಮಲ ಮೂಲಕ ಅಧಿಕಾರ ಪಡೆದು ಕೊಂಡಿದ್ದಾರೆ. ಅವರಿಗೆ ಸ್ವಂತ ಬಲ ಇಲ್ಲ ಎಂದು ಟೀಕಿಸಿದ್ದಾರೆ. ಮುಂದಿನ ಬಾರಿ ಸಮ್ಮಿಶ್ರ ಸರ್ಕಾರ ಅಲ್ಲ, ಸ್ಪಷ್ಟ ಬಹುಮತ ಪಡೆದು ಕಾಂಗ್ರೆಸ್ ಪಕ್ಷ ಆರಿಸಿ ಬರಲಿದೆ ಎಂದರು.
ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ಇಲ್ಲ: ಕಾಂಗ್ರೆಸ್ ಪಕ್ಷ ದಲ್ಲಿ ಆ ಬಣ ಈ ಬಣ ಎಂದಿಲ್ಲ. ಇಲ್ಲಿ ಸೋನಿಯಾ ಗಾಂಧಿ ಬಣ ಒಂದೇ ಇರುವುದು ಬಿಜೆಪಿಯಲ್ಲಿ ಹಲವು ಬಣಗಳಿವೆ. ಕಾಂಗ್ರೆಸ್ ಪಕ್ಷ ದ ಸಿದ್ಧಾಂತವನ್ನು ಒಪ್ಪಿಕೊಂಡು ಯಾವುದೇ ಷರತ್ತು ವಿಧಿಸದೆ ಕಾಂಗ್ರೆಸ್ ಪಕ್ಷ ಕ್ಕೆ ಬರುವವರಿಗೆ ಸ್ವಾಗತ ವಿದೆ.ಈ ಹಿಂದೆ ಪಕ್ಷಕ್ಕೆ ಹಾನಿ ಮಾಡಿ ಹೋದವರನ್ನು ಮತ್ತೆ ಪಕ್ಷಕ್ಕೆ ಸೇರಿಸಿ ಕೊಳ್ಳುವುದಿಲ್ಲ ಎಂದರು.