
ದಿನಾಂಕ:26-07-2025(ಹಾಯ್ ಉಡುಪಿ ನ್ಯೂಸ್)
ಕೋಟ: ಇದೇ ಜು. 26 ರಿಂದ 27ರ ತನಕ ನೇಪಾಳ ರಂಗಶೀಲ ಸ್ಟೇಡಿಯಂನಲ್ಲಿ ನಡೆಯುವ ಅಂತಾರಾಷ್ಟ್ರೀಯ ಮಟ್ಟದ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಪಟು ಕೋಟದ ದಿನೇಶ ಗಾಣಿಗ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿ ವೇಗ ನಡಿಗೆ, ಗುಂಡೆಸೆತ, ಲಾoಗ್ ಜಂಪ್‌ನಲ್ಲಿ ಭಾಗವಹಿಸಲಿದ್ದಾರೆ.
ಈ ಹಿಂದೆ ಥೈಲ್ಯಾoಡ್ ರಾಜಾಬಟಾ ಸ್ಟೇಡಿಯಂನಲ್ಲಿ ನಡೆದ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ಒಂದು ಚಿನ್ನದ ಪದಕ, ಹರ್ಡಲ್ಸ್ ನಲ್ಲಿ ದ್ವಿತೀಯ ಒಂದು ಬೆಳ್ಳಿ ಪದಕ ಮತ್ತು ವೇಗ ನಡಿಗೆಯಲ್ಲಿ ತೃತೀಯ ಕಂಚು ಪದಕ ಹಾಗೂ 2021 ಸಿಂಗಾಪುರ, 2022 ಮಲೇಷಿಯಾ ಹಾಗೂ2023ರಲ್ಲಿ ಶ್ರೀಲಂಕಾ ಅಂತಾರಾಷ್ಟ್ರೀಯ ಮಾಸ್ಟರ್ ಅಥ್ಲೆಟಿಕ್ಸ್ನಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾಗಿದ್ದಾರೆ.