Spread the love

ಬೆಳ್ತಂಗಡಿ: ದಿನಾಂಕ :28-07-2025(ಹಾಯ್ ಉಡುಪಿ ನ್ಯೂಸ್) ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅನಧಿಕೃತವಾಗಿ ಶವಗಳ ಹೂಳುವಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರುದಾರನನ್ನು ಇಂದು ಭಾರಿ ಪೊಲೀಸ್ ಭದ್ರತೆಯಲ್ಲಿ ನೇತ್ರಾವತಿ ಸ್ನಾನ ಘಟ್ಟಕ್ಕೆ ಕರೆತರಲಾಯಿತು.

ತನಿಖೆಯ ಭಾಗವಾಗಿ ಅಧಿಕಾರಿಗಳು ಘಟನಾ ಸ್ಥಳವನ್ನು ಕೂಲಂಕುಷವಾಗಿ ಪರಿಶೀಲಿಸಿದರು. 

1995 ರಿಂದ 2014ರ ಅವಧಿಯಲ್ಲಿ ಧರ್ಮಸ್ಥಳ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಮೃತದೇಹಗಳನ್ನು ಯಾರದೋ ಬಲವಂತಕ್ಕೆ ಬೆದರಿ ಬಲವಂತವಾಗಿ ಹೂತು ಹಾಕಿದ್ದೇನೆಂದು ವ್ಯಕ್ತಿಯೊಬ್ಬ ನ್ಯಾಯಾಲಯದಲ್ಲಿ ಈ ಹಿಂದೆ ಹೇಳಿಕೆ ನೀಡಿದ್ದ.

ಈ ಆರೋಪಗಳು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (SIT) ವನ್ನು ರಚಿಸಿತ್ತು.

ಇಂದು ದೂರುದಾರನೊಂದಿಗೆ ನೇತ್ರಾವತಿ ಸ್ನಾನ ಘಟ್ಟಕ್ಕೆ  ಎಸ್‌ಐಟಿ ಭೇಟಿ ತನಿಖೆಯಲ್ಲಿ ಒಂದು ಮಹತ್ವದ ಹೆಜ್ಜೆಯಾಗಿದೆ.

error: No Copying!