Spread the love

ದಿನಾಂಕ:03-08-2025(ಹಾಯ್ ಉಡುಪಿ ನ್ಯೂಸ್)

ಬೆಂಗಳೂರು:ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಹಾಸನದ ಮಾಜಿ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವನ ಪರ್ಯಂತ ಶಿಕ್ಷೆ ಹಾಗೂ 11 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಪ್ರಕರಣದ ವಿಚಾರಣೆ ಪೂರ್ಣಗೊಂಡು ನ್ಯಾಯಮೂರ್ತಿ ಸಂತೋಷ ಗಜಾನನ ಭಟ್ ಅವರು ನಿನ್ನೆ ಶುಕ್ರವಾರ ಮಾಜಿ ಸಂಸದ ದೋಷಿ ಎಂದು ತೀರ್ಪು ನೀಡಿದ್ದರು. ಇಂದು ಶಿಕ್ಷೆಯ ಪ್ರಮಾಣ ಪ್ರಕಟಿಸಿದ ನ್ಯಾಯಾಧೀಶರು ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನು ದಂಡದ ಪೈಕಿ 7 ಲಕ್ಷ ರೂಪಾಯಿಯನ್ನು ಸಂತ್ರಸ್ತೆಗೆ ಪರಿಹಾರ ನೀಡುವಂತೆ ಕೋರ್ಟ್ ಸೂಚಿಸಿದೆ. ಪ್ರಜ್ವಲ್ ವಿರುದ್ಧ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಒಂದು ಪ್ರಕರಣದಲ್ಲಿ ಶಿಕ್ಷೆ ಪ್ರಕಟವಾಗಿದ್ದು, ಇನ್ನೂ ಮೂರು ಪ್ರಕರಣಗಳ ವಿಚಾರಣೆ ಬಾಕಿ ಇದೆ.

error: No Copying!