
ದಿನಾಂಕ:08-08-2025(ಹಾಯ್ ಉಡುಪಿ ನ್ಯೂಸ್) ಬೆಳ್ತಂಗಡಿ: ಧರ್ಮಸ್ಥಳದ ನೇತ್ರಾವತಿಯ ಪಾಂಗಳದ ಬಳಿ ಯೂಟ್ಯೂಬರ್ಸ್ ಗಳ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಧರ್ಮಸ್ಥಳಕ್ಕೆ ಹೋಗಿದ್ದ ಸಂದರ್ಭದಲ್ಲಿ ಹಲ್ಲೆ ನಡೆದಿತ್ತು. ಇನ್ನು ಹಲ್ಲೆಗೆ ಸಂಬಂಧಿಸಿದಂತೆ ಮಾತನಾಡಿರುವ ರಜತ್ ನಾನು ಧರ್ಮಸ್ಥಳಕ್ಕೆ ಹೋಗಿದ್ದು, ಸೌಜನ್ಯ ಪ್ರಕರಣದಲ್ಲಿ ನ್ಯಾಯ ಕೇಳೋಕೆ ಮಾತ್ರ. ನಾನು ಯಾವತ್ತೂ ಧರ್ಮಸ್ಥಳದ ಬಗ್ಗೆ ತಪ್ಪಾಗಿ ಮಾತನಾಡಿಲ್ಲ. ನಾನು ಸೌಜನ್ಯ ಕುಟುಂಬಸ್ಥರನ್ನು ಭೇಟಿ ಮಾಡೋಕೆ ಹೋಗಿದ್ದೆ. ಈ ವೇಳೆ ಯೂಟ್ಯೂಬರ್ಸ್ ಜೊತೆ ಮಾತನಾಡುತ್ತಿದ್ದಾಗಲೇ ಅಲ್ಲಿಗೆ ಬಂದ ಗುಂಪೊಂದು ಹಲ್ಲೆ ನಡೆಸಿತು ಎಂದು ತಿಳಿಸಿದ್ದಾರೆ.
ಗುಂಪು ಯೂಟ್ಯೂಬರ್ಸ್ಗೆ ಕಾಲಿನಿಂದ ಒದ್ದು, ಕೋಲಲ್ಲಿ ಮತ್ತು ಕಲ್ಲಲ್ಲಿ ಹೊಡೆದಿದ್ದಾರೆ. 30ಕ್ಕೂ ಹೆಚ್ಚು ಜನರು ಹಲ್ಲೆ ಮಾಡಿದ್ದರಿಂದ ಏನು ಮಾಡಲಿಕ್ಕಾಗದ ಸ್ಥಿತಿಯಲ್ಲಿ ನಿಂತುಕೊಂಡಿದ್ದೆವು ಎಂದು ರಜತ್ ಕಿಶನ್ ಯೂಟ್ಯೂಬರ್ಸ್ ಮೇಲೆ ನಡೆದ ಹಲ್ಲೆ ಬಗ್ಗೆ ವಿವರಿಸಿದ್ದಾರೆ. ನನಗೆ ಈಗ ಬೆದರಿಕೆ ಕರೆಗಳು ಬರುತ್ತಿವೆ ಎಂದು ಕಿಶನ್ ಹೇಳಿದ್ದಾರೆ.