ನವದೆಹಲಿ:ಪೆಟ್ರೋಲ್ ಬೆಲೆ ಏರಿಕೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ;’ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಯಂತ್ರಿಸಲು ಮತ್ತು ಗಗನಕ್ಕೇರಿರುವ ಬೆಲೆ ಏರಿಕೆಯಿಂದ ಜನರಿಗೆ ಪರಿಹಾರ ನೀಡಲು ಕೇಂದ್ರ ಸರ್ಕಾರ ಸಬ್ಸಿಡಿ ನೀಡಬೇಕು. ಹಿಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರವೂ ಬೆಲೆ ನಿಯಂತ್ರಣಕ್ಕೆ ಇದೇ ರೀತಿ ಕ್ರಮ ಕೈಗೊಂಡಿತ್ತು. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಇಂದಿಗಿಂತ ಹೆಚ್ಚಿದ್ದರೂ ಹಿಂದಿನ ಯುಪಿಎ ಸರಕಾರ ಸಬ್ಸಿಡಿ ನೀಡುವ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿಯಂತ್ರಿಸುವ ಮೂಲಕ ಸಾರ್ವಜನಿಕರಿಗೆ ನೆಮ್ಮದಿ ನೀಡಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು.