
ದಿನಾಂಕ:10-08-2025(ಹಾಯ್ ಉಡುಪಿ ನ್ಯೂಸ್)
ಬೆಂಗಳೂರು : ಬೆಂಗಳೂರು ಮಹಾನಗರದ ಹಲವೆಡೆ ರವಿವಾರ (ಆ.10) ಸಂಜೆ ಧಾರಾಕಾರ ಮಳೆಯಾಗಿದೆ. ಸುರಿದ ಮಳೆಗೆ ಬೆಂಗಳೂರು ಮಹಾನಗರ ತಂಪಾಗಿದೆ. ಆದರೆ, ವೀಕೆಂಡ್ ಅಂತ ಎಂಜಾಯ್ ಮಾಡಲು ಹೊರಗಡೆ ಬಂದಿದ್ದ ಜನರು ಮಳೆಯಲ್ಲಿ ಸಿಲುಕಿ ಪರದಾಡಿದರು, ತೊಯ್ದು ನಿರಾಸೆಯಿಂದ ಮನೆಗಳತ್ತ ತೆರಳಿದರು. ಬೆಂಗಳೂರಿನ ಸಸ್ಯಕಾಶಿ ಲಾಲ್ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಸಿಟಿ ಮಾರ್ಕೆಟ್, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವೆಡೆ ಮಳೆಯಾಗಿದೆ.ಅಲ್ಲದೆ, ವಿಧಾನಸೌಧ, ಮೆಜೆಸ್ಟಿಕ್, ಕುಮಾರಕೃಪಾ ರಸ್ತೆ, ರೇಸ್ ಕೋರ್ಸ್, ವಿಂಡ್ಸರ್ ಮ್ಯಾನರ್, ಕಾರ್ಪೋರೇಶನ್ ಸರ್ಕಲ್ನ ಸುತ್ತಮುತ್ತ ಕೂಡ ಜೋರು ಮಳೆಯಾಯಿತು. ದಿಢೀರನೆ ಮಳೆ ಬಂದಿದ್ದರಿಂದ ಜನರು ಬಸ್ ನಿಲ್ದಾಣ, ಅಂಗಡಿಗಳ ಎದುರು ಕೆಲ ಗಂಟೆ ಆಸರೆ ಪಡೆದರು. ಇನ್ನು, ಛತ್ರಿ ಹಿಡಿದು ಜನರು ಓಡಾಡುತ್ತಿರುವ ದೃಶ್ಯಗಳು ಕಂಡುಬಂದವು. ಮಳೆಯಿಂದ ಸ್ಕೈ ವಾಕ್, ಬ್ರಿಡ್ಜ್ಗಳ ಕೆಳಗೆ ಬೈಕ್ ಸವಾರರು ಆಸರೆ ಪಡೆದುಕೊಂಡರು