
ದಿನಾಂಕ:10-08-2025(ಹಾಯ್ ಉಡುಪಿ ನ್ಯೂಸ್)
ಕೆಲ ದಿನಗಳ ಹಿಂದೆ ಧರ್ಮಸ್ಥಳದ ನೇತ್ರಾವತಿ ಪಾಂಗಳ ಕ್ರಾಸ್ ಬಳಿ ಎರಡು ಗುಂಪು ಮಧ್ಯೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಯೂಟ್ಯೂಬರ್ ಗಳ ಮೇಲೆ ಹಲ್ಲೆ ನಡೆದ ಮೇಲೆ ಧರ್ಮಸ್ಥಳದ ಪಾಂಗಳ ಕ್ರಾಸ್ ಗುಂಪು ಘರ್ಷಣೆ ಉಂಟಾಗಿತ್ತು. ನಂತರ ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಪೊಲೀಸರು ಲಘು ಲಾಠಿ ಚಾರ್ಜ್ ನಡೆಸಿದ್ದರು. ಈಗಾಗಲೇ ಧರ್ಮಸ್ಥಳ ಪೊಲೀಸರು 6 ಮಂದಿಯನ್ನು ಬಂಧಿಸಿದ್ದು, ಇನ್ನುಳಿದ 27 ಮಂದಿಗೆ ಹುಡುಕಾಟ ನಡೆಸುತ್ತಿದ್ದಾರೆ