Spread the love

ದಿನಾಂಕ:13-08-2025(ಹಾಯ್ ಉಡುಪಿ ನ್ಯೂಸ್)

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ಸ್ಥಳ ಸಂಖ್ಯೆ 13ರಲ್ಲಿ 300ಕ್ಕೂ ಹೆಚ್ಚು ಶವಗಳನ್ನು ಹೂತು ಹಾಕಿದ್ದಾಗಿ ಹೇಳಿದ್ದು ಆ ಜಾಗದಲ್ಲಿ ನಿನ್ನೆಯಿಂದ ಅಗೆಯುವ ಕಾರ್ಯಾಚರಣೆ ಶುರುವಾಗಿತ್ತು. ಆದರೆ ಸರಿಸುಮಾರು 14 ಅಡಿ ಆಳ ಅಗೆದರೂ ಇಲ್ಲಿಯವರೆಗೂ ಒಂದೇ ಒಂದೂ ಕಳೇಬರ ಸಿಕ್ಕಿಲ್ಲ. ಹೀಗಾಗಿ ಅಗೆದಿರುವ ಜಾಗದಲ್ಲಿ ಮತ್ತೆ ಮಣ್ಣನ್ನು ಮುಚ್ಚಲಾಗುತ್ತಿದೆ. ಈಮಧ್ಯೆ, ಸಾಕ್ಷಿ ಹಾಗೂ ದೂರುದಾರ ತೋರಿಸಿರುವ 13ನೇ ಸ್ಥಳದಲ್ಲೂ ಅಸ್ಥಿಪಂಜರಗಳು ಪತ್ತೆಯಾಗದಿದ್ದರೆ ಎಸ್ಐಟಿ ಶೋಧ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಸಭೆ ನಡೆದಿದ್ದು, ಸಭೆಯಲ್ಲಿ ಧರ್ಮಸ್ಥಳ ಸಾಮೂಹಿಕ ಶವಗಳ ದಫನ ಕ್ರಿಯೆ ಪ್ರಕರಣ ಕುರಿತು ಚರ್ಚೆಗಳು ನಡೆದಿವೆ. 13ನೇ ಸ್ಥಳದಲ್ಲೂ ಯಾವುದೇ ಅಸ್ಥಿಪಂಜರ ಪತ್ತೆಯಾಗದೇ ಹೋದಲ್ಲಿ ಎಸ್ಐಟಿ ಶೋಧ ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಗಬಹುದು. ಈ ಬಗ್ಗೆ ಸಚಿವರ ಜೊತೆಗೆ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಗುಂಪು ಮುಂದಿನ ಭಾನುವಾರ ಧರ್ಮಸ್ಥಳಕ್ಕೆ ಭೇಟಿ ನೀಡಲಿದೆ. ಅಲ್ಲದೆ,ಶವಗಳ ಸಾಮೂಹಿಕ ಸಮಾಧಿ ಪ್ರಕರಣವನ್ನು ಉಲ್ಲೇಖಿಸಿ ಧರ್ಮಸ್ಥಳದ ಹೆಸರನ್ನು ಹಾಳುಮಾಡುವ ಪ್ರಯತ್ನಗಳ ವಿರುದ್ಧ ಧರ್ಮಸ್ಥಳ ಭಕ್ತರು ರಾಜ್ಯದ ಹಲವೆಡೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

error: No Copying!