
ದಿನಾಂಕ:14-08-2025(ಹಾಯ್ ಉಡುಪಿ ನ್ಯೂಸ್)
ಬಳ್ಳಾರಿಯಲ್ಲಿ ATM ಕಿಯೋಸ್ಕ್ ಮುರಿದು ಹಣ ಕದಿಯುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಸೋಮವಾರ ಮಧ್ಯರಾತ್ರಿ ನಗರದ ಕಾಳಮ್ಮ ಸರ್ಕಲ್ ಬಳಿ ಇರುವ ಆಕ್ಸಿಸ್ ಬ್ಯಾಂಕ್ ಎಟಿಎಂಗೆ ನುಗ್ಗಿ ಕಳ್ಳತನ ಮಾಡಲು ಯತ್ನಿಸಿದ ಆರೋಪಿಯನ್ನು ರಾತ್ರಿ ಬೀಟ್ ಪೊಲೀಸರು ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ. ಬ್ರೂಸ್‌ಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಮಲ್ಲಿಕಾರ್ಜುನ್ ಅವರಿಗೆ ಎಟಿಎಂನಲ್ಲಿ ಕಳ್ಳನ ಇರುವಿಕೆಯ ಬಗ್ಗೆ ಸುಳಿವು ಸಿಕ್ಕಿದ್ದು, ಕೂಡಲೇ ಎಎಸ್‌ಐ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳು ಎಟಿಎಂಗೆ ಧಾವಿಸಿ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿ ವೆಂಕಟೇಶ್ ಆಂಧ್ರ ಪ್ರದೇಶದ ಅನಂತಪುರದ ಮೂಲದವರಾಗಿದ್ದಾನೆ.
ಪೊಲೀಸ್ ಕಾರ್ಯಾಚರಣೆಯ ರೋಚಕ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.