ದಿನಾಂಕ:14-08-2025(ಹಾಯ್ ಉಡುಪಿ ನ್ಯೂಸ್)
ಮಾಜಿ ಡಿಜಿಪಿ ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) 1,150 ಪುಟಗಳ ಚಾರ್ಜ್‌ಶೀಟ್ ಸಲ್ಲಿಸಿದ್ದು, ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಿದೆ. 1981ನೇ ಬ್ಯಾಚ್ ಐಪಿಎಸ್ ಅಧಿಕಾರಿ ಪ್ರಕಾಶ್ ಅವರನ್ನು ಏಪ್ರಿಲ್ 20ರಂದು ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಪಲ್ಲವಿ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
ಅಪರಾಧದ ತೀವ್ರತೆಯನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಿತ್ತು. ಕೊಲೆಗೆ ಸಂಬಂಧಿಸಿದಂತೆ ಮೊದಲ ಎಸಿಎಂಎಂ ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದ್ದು, ಓಂ ಪ್ರಕಾಶ್ ಪತ್ನಿ ಪಲ್ಲವಿ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಗಳು ಕೃತಿ ವಿರುದ್ಧ ಸಾಕಷ್ಟು ಪುರಾವೆಗಳಿಲ್ಲದ ಕಾರಣ ಆರೋಪಗಳಿಂದ ಮುಕ್ತಗೊಳಿಸಲಾಗಿದೆ. ಪಲ್ಲವಿ ಅವರನ್ನು ಕೊಲೆ ಆರೋಪದ ಮೇಲೆ ಬಂಧಿಸಲಾಗಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾರೆ.
