Spread the love

ದಿನಾಂಕ:15-08-2025(ಹಾಯ್ ಉಡುಪಿ ನ್ಯೂಸ್)

ಚಿಕ್ಕಮಗಳೂರು: ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೂರಾರು ಶವಗಳನ್ನು ಸಂಶಯಾಸ್ಪದ ರೀತಿಯಲ್ಲಿ ಹೂತಿಟ್ಟಿರುವುದಾಗಿ ಮಾಸ್ಕ್ ಮ್ಯಾನ್ ದೂರು ನೀಡಿದ್ದು ಇದರ ಬೆನ್ನಲ್ಲೇ ಅಸ್ಥಿಪಂಜರ ಶೋಧ ಕಾರ್ಯಾಚರಣೆಯೂ ನಡೆಯುತ್ತಿದೆ. ಇದರ ಮಧ್ಯೆ ಜೈನ ಸಮುದಾಯದ ಹೆಣ್ಣು ಮಕ್ಕಳ ಬಗ್ಗೆ ಅಶ್ಲೀಲ ಪೋಸ್ಟ್ ಮಾಡಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರಿನ ಅಜ್ಜಂಪುರ ಠಾಣೆ ಪೊಲೀಸರು ಹೊಸಹಳ್ಳಿಯ ಉಮೇಶ್ ಎಂಬಾತನನ್ನು ಬಂಧಿಸಿದ್ದಾರೆ. ಉಮೇಶ್ ಗೌಡ ತನ್ನ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಜೈನ ಸಮಾಜದ ಹೆಣ್ಣು ಮಕ್ಕಳ ಕುರಿತು ಅಶ್ಲೀಲ ಕಾಮೆಂಟ್ ಹಾಕಿದ್ದನು. ಈ ಬಗ್ಗೆ ಕಳಸ ಮೂಲದ ಪದ್ಮರಾಜಯ್ಯ ಎಂಬವರು ಉಮೇಶ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಅಜ್ಜಂಪುರ ಪೊಲೀಸರು ಉಮೇಶ್ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿ ಉಮೇಶ್ ನನ್ನು ಬಂಧಿಸಿದ್ದಾರೆ.

error: No Copying!