Spread the love

ದಿನಾಂಕ:15-08-2025(ಹಾಯ್ ಉಡುಪಿ ನ್ಯೂಸ್)

79ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಮಾಣಿಕ್​ ಷಾ ಪರೇಡ್ ಮೈದಾನದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಧ್ವಜಾರೋಹಣ ನೆರವೇರಿಸಿದ್ದು, ರಾಜ್ಯ ಸರ್ಕಾರದ ಖಾತರಿ ಯೋಜನೆಯನ್ನು ಪ್ರಸ್ತಾಪಿಸಿ, ‘ಅನ್ನ ಭಾಗ್ಯ’, ‘ಶಕ್ತಿ’, ‘ಗೃಹ ಲಕ್ಷ್ಮಿ’, ‘ಗೃಹ ಜ್ಯೋತಿ’ ಮತ್ತು ‘ಯುವ ನಿಧಿ’ ಅನುಷ್ಠಾನಕ್ಕಾಗಿ 96,000 ಕೋಟಿ ರೂ.ಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹೇಳಿದ್ದಾರೆ. “ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮನ್ ಯಾಂಗ್ ಕೂಡ ಈ ಯೋಜನೆಗಳನ್ನು ಶ್ಲಾಘಿಸಿದ್ದಾರೆ” ಎಂದು ಸಿಎಂ ತಿಳಿಸಿದ್ದು, “ಅಸಮಾನತೆಯನ್ನು ನಿವಾರಿಸಲು, ಖಾತರಿಗಳು ಮತ್ತು ಇತರ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಚಯಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಟೀಕಾ ಪ್ರಹಾರ ನಡೆಸಿರುವ ಸಿಎಂ, ಐಟಿ, ಇಡಿ, ಸಿಬಿಐ ದಾಳಿಗಳ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ. ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಹಿನ್ನೆಲೆಯಲ್ಲಿ ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿದ ಅವರು, ಕೇಂದ್ರ ಸರ್ಕಾರ ಯೂರಿಯಾ ಪೂರೈಸುತ್ತಿಲ್ಲ ಎಂದು ಆರೋಪ ಮಾಡಿದರು. ಸಮಸ್ಯೆಯನ್ನು ಕೂಡಲೆ ಪರಿಹರಿಸಬೇಕೆಂದು ಒಕ್ಕೂಟ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

error: No Copying!