
ದಿನಾಂಕ:17-08-2025(ಹಾಯ್ ಉಡುಪಿ ನ್ಯೂಸ್)
ಆರ್‌ಎಸ್‌ಎಸ್ ಭಾರತದ ತಾಲಿಬಾನ್ ಇದ್ದಂತೆ ಎಂದು ವಿಧಾನ ಪರಿಷತ್ ಸದಸ್ಯ ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್‌ಎಸ್‌ಎಸ್ ಹೊಗಳಿದ್ದಕ್ಕಾಗಿ ಹರಿ ಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ. ಆರ್‌ಎಸ್‌ಎಸ್ ನವರು ದೇಶದಲ್ಲಿ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ನಾನು ಆರ್‌ಎಸ್‌ಎಸ್ ಅನ್ನು ತಾಲಿಬಾನ್‌ಗೆ ಮಾತ್ರ ಹೋಲಿಸುತ್ತೇನೆ, ಅವರು ಭಾರತೀಯ ತಾಲಿಬಾನ್‌ಗಳು ಮತ್ತು ಪ್ರಧಾನಿ ಅವರನ್ನು ಕೆಂಪು ಕೋಟೆಯಿಂದ ಶ್ಲಾಘಿಸುತ್ತಿದ್ದಾರೆ” ಎಂದು ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ ಯಾವುದೇ ‘ಸಂಘಿ’ ಇದ್ದಾರಾ? ಎಂದು ಹರಿಪ್ರಸಾದ್ ಪ್ರಶ್ನಿಸಿದ್ದಾರೆ.
.