
ದಿನಾಂಕ: 18-08-2025 (ಹಾಯ್ ಉಡುಪಿ ನ್ಯೂಸ್)
ಮುಖ್ಯಮಂತ್ರಿ ಬದಲಾವಣೆ ಕುರಿತು ಪದೇ ಪದೇ ಹೇಳಿಕೆ ನೀಡುತ್ತಿದ್ದ ಚನ್ನಗಿರಿ ಶಾಸಕ ಬಸವರಾಜು ಶಿವಗಂಗಾಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿ ನೊಟೀಸ್ ಜಾರಿಗೊಳಿಸಿದೆ.
‘ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟು ಮಾಡುವ ರೀತಿಯ ಹೇಳಿಕೆಗಳನ್ನು ನೀಡಿದ್ದೀರಿ. ತಮ್ಮ ಈ ಹೇಳಿಕೆಗಳಿಂದ ಪಕ್ಷಕ್ಕೆ ಮುಜುಗರ ಉಂಟುಮಾಡಿದೆ. ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಈ ನೋಟಿಸ್ ನೀಡಲಾಗಿದೆ.ಏಳು ದಿನಗಳಲ್ಲಿ ನಿಮ್ಮ ಹೇಳಿಕೆಗಳ ಕುರಿತು ಸಮಜಾಯಿಷಿ ನೀಡಬೇಕು’ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.