
ದಿನಾಂಕ:19-08-2025(ಹಾಯ್ ಉಡುಪಿ ನ್ಯೂಸ್)
ಬೆಂಗಳೂರು ಪೊಲೀಸರು ಮಹಿಳೆ ಸೇರಿದಂತೆ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿ 5.40 ಕೋಟಿ ರೂ. ಮೌಲ್ಯದ ನಿಷೇಧಿತ ಮಾದಕವಸ್ತು ಎಂಡಿಎಂಎ ಕ್ರಿಸ್ಟಲ್‌ನ್ನು ವಶಪಡಿಸಿಕೊಂಡಿದ್ದಾರೆ. ಎಲೆಕ್ಟ್ರಾನಿಕ್‌ಸಿಟಿಯ ಅಪರಿಚಿತ ವಿದೇಶಿ ವ್ಯಕ್ತಿಯೊಬ್ಬನನ್ನು ಬಂಧಿಸಿ ಆತನ ವಶದಲ್ಲಿದ್ದ 180 ಗ್ರಾಂ ಎಂಡಿಎಂಎ ಕ್ರಿಸ್ಟಲ್ ವಶಪಡಿಸಿಕೊಂಡಿದ್ದಾರೆ. ವಿದ್ಯಾರಣ್ಯಪುರದಲ್ಲಿ ನೆಲೆಸಿದ್ದ ಮಹಿಳೆಯನ್ನು ವಶಕ್ಕೆ ಪಡೆದ ಪೊಲೀಸರು 1 ಕೆ.ಜಿ 514 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ 5 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.