
ದಿನಾಂಕ:20-08-2025(ಹಾಯ್ ಉಡುಪಿ ನ್ಯೂಸ್)
ರಾಜ್ಯದ ದಲಿತ ಸಮುದಾಯದ ಬಹುಕಾಲದ ಬೇಡಿಕೆಯಾದ ಒಳ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಎಡಗೈ ಹಾಗೂ ಬಲಗೈ ಸಮುದಾಯಕ್ಕೆ ತಲಾ ಶೇ. 6 ರಷ್ಟು ಮೀಸಲಾತಿ ಕಲ್ಪಿಸಲಾಗುವುದು, ಇನ್ನು 63 ಜಾತಿಗಳಿರುವ ಇತರ ಸಮುದಾಯಕ್ಕೆ ಶೇಕಡ 5ರಷ್ಟು ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ವಿಧಾನಸಭೆಯಲ್ಲಿ ಘೋಷಿಸಿದ್ದಾರೆ. ವಿಧಾಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿನ್ನೆ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಈ ಮೂಲಕ ದಶಕಗಳ ಹೋರಾಟಕ್ಕೆ ನಮ್ಮ ಸರ್ಕಾರ ನ್ಯಾಯ ಒದಗಿಸಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ, ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಹೋರಾಟಗಾರರ ಮೇಲಿನ ಮೊಕದ್ದಮೆಗಳನ್ನು ಹಿಂಪಡೆಯಲು ಸರ್ಕಾರ ತೀರ್ಮಾನ ಮಾಡಿದೆ ಎಂದು ಸಿಎಂ ತಿಳಿಸಿದ್ದಾರೆ.