
ದಿನಾಂಕ:20-08-2025(ಹಾಯ್ ಉಡುಪಿ ನ್ಯೂಸ್)
ಧರ್ಮಸ್ಥಳ ಪ್ರಕರಣದ ಸಂಬಂಧ ದಿನದಿಂದ ದಿನಕ್ಕೆ ಹೊಸ ಮಾಹಿತಿ ಬಹಿರಂಗವಾಗುತ್ತಿದ್ದು, ನೇತ್ರಾವತಿ ನದಿ ದಡದಲ್ಲಿ ನೂರಾರು ಮಹಿಳೆಯರು, ಯುವತಿಯರ ಶವಗಳನ್ನು ಹೂತು ಹಾಕಿದ್ದೇನೆ ಎಂಬ ಅನಾಮಿಕನ ಕುರಿತು ಆತನ ಜೊತೆಗೆ ಕೆಲಸ ಮಾಡಿದ್ದ ಸ್ನೇಹಿತ ನೀಡಿರುವ ಹೇಳಿಕೆ ಸಂಚಲನ ಮೂಡಿಸಿದೆ. ಮಾಸ್ಕ್ ಮ್ಯಾನ್ ಹೇಳಿದಂತೆ ಧರ್ಮಸ್ಥಳದ ಬಳಿ ನೂರಾರು, ಸಾವಿರಾರು ಶವಗಳನ್ನು ಹೂತು ಹಾಕಿಲ್ಲ. ಆತ ಹಣಕ್ಕಾಗಿ ಈ ರೀತಿಯ ಸುಳ್ಳು ಆರೋಪ ಮಾಡಿರುವ ಸಾಧ್ಯತೆಯಿದೆ ಎಂದು ಸ್ವಚ್ಛತಾ ಕೆಲಸ ಮಾಡುತ್ತಿದ್ದ ರಾಜು ಹೇಳಿದ್ದಾರೆ. ಧರ್ಮಸ್ಥಳದಲ್ಲಿ ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದ್ದೇನೆ. ನೂರಾರು ಶವಗಳನ್ನು ಹೂತಿದ್ದೇನೆ ಎನ್ನುವುದು ಸುಳ್ಳು. ಅಷ್ಟೊಂದು ಶವ ಹೂತಿದ್ದರೆ ಮೂಳೆಗಳಾದ್ರೂ ಸಿಗಬೇಕಿತ್ತು ಎಂದು ಅವರು ಹೇಳಿದ್ದಾರೆ.