
ದಿನಾಂಕ:20-08-2025(ಹಾಯ್ ಉಡುಪಿ ನ್ಯೂಸ್)
ಆನ್‌ಲೈನ್ ರಿಯಲ್ ಮನಿ ಗೇಮಿಂಗ್ ಮೇಲೆ ಸಂಪೂರ್ಣ ನಿಷೇಧ ಹೇರುವ ಕೇಂದ್ರದ ನಿರ್ಧಾರಕ್ಕೆ ಐಟಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದು “ಮೋದಿ ಸರ್ಕಾರದ ಕೆಟ್ಟ ನೀತಿ ನಿರೂಪಣೆಯ ಮತ್ತೊಂದು ಮಾಸ್ಟರ್‌ಸ್ಟ್ರೋಕ್” ಎಂದು ಟೀಕಿಸಿದ್ದಾರೆ.
ಕೇಂದ್ರದ ಈ ನಿರ್ಧಾರವು ರಾಜ್ಯದ ಆದಾಯ, ಉದ್ಯೋಗ ಮತ್ತು ಹೂಡಿಕೆಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. “ಆನ್‌ಲೈನ್ ಆರ್‌ಎಂಜಿ ಮೂಲಕ ಭಾರತವು ಜಿಎಸ್‌ಟಿ ಮತ್ತು ಆದಾಯ ತೆರಿಗೆಯಿಂದ ವಾರ್ಷಿಕ 20,000 ಕೋಟಿ ರೂ. ಗಳಿಸುತ್ತಿದೆ. ನಿಷೇಧ ರಾಜ್ಯಗಳ ಈ ಆದಾಯವನ್ನು ಕಸಿದುಕೊಳ್ಳುತ್ತದೆ” ಎಂದು ಪ್ರಿಯಾಂಕ್ ಖರ್ಗೆ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿದ್ದಾರೆ. 2,000 ಕ್ಕೂ ಹೆಚ್ಚು ಗೇಮಿಂಗ್ ಸ್ಟಾರ್ಟ್‌ಅಪ್‌ಗಳು ಮತ್ತು ಐಟಿ, ಎಐ ಹಾಗೂ ವಿನ್ಯಾಸದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಅಪಾಯಕ್ಕೆ ಸಿಲುಕುತ್ತವೆ ಎಂದು ಸಚಿವರು ಆರೋಪಿಸಿದ್ದಾರೆ.