IMG_20250822_201442.jpg
Spread the love

ದಿನಾಂಕ:22-08-2025(ಹಾಯ್ ಉಡುಪಿ ನ್ಯೂಸ್)

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಇಂದು ಘೋಷಿಸಿದ್ದಾರೆ.

ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು ಬಾನು ಮುಷ್ತಾಕ್ ಅವರ ‘ಹೃದಯ ದೀಪ’ ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ ಮಹಿಳೆಗೆ ಬೂಕರ್ ಪ್ರಶಸ್ತಿ ಸಿಕ್ಕಿದ್ದು ಬಹಳ ಸಂತೋಷವಾಗಿದೆ. ಹೋರಾಟದ ಹಿನ್ನೆಲೆಯಿಂದ ಬಂದವರು ಬಾನು ಮುಷ್ತಾಕ್, ರೈತ ಮತ್ತು ಕನ್ನಡ ಚಳವಳಿಯಲ್ಲೂ ಕೆಲಸ ಮಾಡಿದ್ದಾರೆ ಹೀಗಾಗಿ ಅವರನ್ನು ದಸರಾ ಮಹೋತ್ಸವದ ಉದ್ಘಾಟನೆಗೆ ಆಹ್ವಾನಿಸಿದ್ದೇವೆ ಎಂದರು.

ಈ ಬಾರಿ ಮೈಸೂರು ದಸರಾ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್ 2ರವರೆಗೆ 11 ದಿನಗಳ ಕಾಲ ನಡೆಯಲಿದ್ದು, ಉದ್ಘಾಟನೆಗೆ ಮೈಸೂರು ಜಿಲ್ಲಾಡಳಿತವು, ಕನ್ನಡದ ಲೇಖಕಿ ಬಾನು ಮುಷ್ತಾಕ್ ಅವರನ್ನು ಗೌರವದಿಂದ ಅಧಿಕೃತವಾಗಿ ಆಹ್ವಾನಿಸಲಿದೆ ಎಂದು ಸಿಎಂ ತಿಳಿಸಿದರು.

ಇನ್ನು ದಸರಾದಲ್ಲಿ ಏರ್ ಶೋಗೆ ಅನುಮತಿ ಸಿಕ್ಕಿದೆ. ಇದಕ್ಕಾಗಿ ನಾನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದೆ. ಅವರಿಗೂ ದಸರಾಗೆ ಆಹ್ವಾನಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

error: No Copying!