ದಿನಾಂಕ:24-08-2025(ಹಾಯ್ ಉಡುಪಿ ನ್ಯೂಸ್)
ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ದೂರುದಾರನ ಆರೋಪಗಳಿಗೆ ಪರೋಕ್ಷವಾಗಿ ಬೆಂಬಲಿಸಿದ್ದ ಹೋರಾಟಗಾರ ಗಿರೀಶ್ ಮಟ್ಟಣ್ಣನವರ್ ಇದೀಗ ಚಿನ್ನಯ್ಯನ ಬಂಧನವನ್ನು ಸ್ವಾಗತಿಸಿದ್ದಾರೆ. ಅಲ್ಲದೆ ಆತನ ಮಂಪರು ಪರೀಕ್ಷೆ ನಡೆಸುವಂತೆ ಸಲಹೆ ನೀಡಿದ್ದಾರೆ. ಇನ್ನು 2003ರ ಅನನ್ಯಾ ಭಟ್ ನಾಪತ್ತೆ ಪ್ರಕರಣಕ್ಕೂ ಟ್ವಿಸ್ಟ್ ಸಿಕ್ಕಿದ್ದು ದೂರುದಾರ ಸುಜಾತ ಭಟ್ ಉಲ್ಟಾ ಹೊಡೆದಿದ್ದಾರೆ. ಅನನ್ಯಾ ಭಟ್ ಕಥೆ ಸುಳ್ಳು, ಅನನ್ಯಾ ಅನ್ನೋ ಮಗಳೇ ನನಗೆ ಇರಲಿಲ್ಲ. ನಾನು ಹೇಳಿದ್ದು ಸುಳ್ಳು. ಗಿರೀಶ್ ಮಟ್ಟಣ್ಣನವರ್, ಜಯಂತ್ ಹೇಳಿಕೊಟ್ಟಂತೆ ನಾನು ಹೇಳಿದ್ದೆ ಎಂದಿದ್ದಾರೆ. ಮತ್ತೊಂದೆಡೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಬಂಧನವಾಗಿದ್ದ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಉಡುಪಿ ಕೋರ್ಟ್ ಜಾಮೀನು ನೀಡಿದೆ.
