IMG_20250830_132823.png
Spread the love

ಉಡುಪಿ: ದಿನಾಂಕ:30-08-2025(ಹಾಯ್ ಉಡುಪಿ ನ್ಯೂಸ್) ಕರಾವಳಿ ಬೈಪಾಸ್ ಬಳಿಯ ಬಾರೊಂದರ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜುಗಾರಿ ನಡೆಸುತ್ತಿದ್ದ ವ್ಯಕ್ತಿಯನ್ನು ಉಡುಪಿ ನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ರಮೇಶ್ ವೈ ಅವರು ಬಂಧಿಸಿದ್ದಾರೆ.

ಉಡುಪಿ ನಗರ ಪೊಲೀಸ್ ಠಾಣೆಯ  ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ  ರಮೇಶ್ ವೈ ಅವರು ದಿನಾಂಕ: 29/08/2025 ರಂದು  ಕರ್ತವ್ಯದಲ್ಲಿರುವಾಗ ಸಂಜೆ ERSS  ಕರ್ತವ್ಯದಲ್ಲಿದ್ದ ಸಿಹೆಚ್ ಸಿ,  ಜಯಕರರವರು ಠಾಣೆಗೆ ಕರೆ ಮಾಡಿ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಕರಾವಳಿ ಬೈಪಾಸ್ ಬಳಿ ಇರುವ ಗಂಗೊತ್ರಿ ಬಾರ್ & ರೆಸ್ಟೊರೆಂಟ್ ಹಿಂಭಾಗದ ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾಗಿ ಓರ್ವ ವ್ಯಕ್ತಿ ಮಟ್ಕಾ ಜುಗಾರಿ ಆಟದ ಬಗ್ಗೆ ಹಣ ಸಂಗ್ರಹಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ ಮೇರೆಗೆ ಠಾಣಾ ಸಿಬ್ಬಂದಿಗಳೊಂದಿಗೆ  ದಾಳಿ ನಡೆಸಿದ್ದಾರೆ, 

ಅಲ್ಲಿ ಮಟ್ಕಾ ಜುಗಾರಿ ಆಟ ನಡೆಸುತ್ತಿದ್ದ ವರುಣ್ (28) ಹೆರ್ಗಾ ಗ್ರಾಮ, ಮಣಿಪಾಲ, ಉಡುಪಿ ಎಂಬಾತನನ್ನು ಬಂಧಿಸಿ ವಶಕ್ಕೆ ಪಡೆದು ವಿಚಾರಿಸಿದಾಗ ತಾನು ಸ್ವಂತ ಲಾಭಕೋಸ್ಕರ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಆಟದ ಬಗ್ಗೆ ಹಣವನ್ನು ಸಂಗ್ರಹಿಸುತ್ತಿರುವುದಾಗಿ ತಿಳಿಸಿದ್ದು, ಆಪಾದಿತನ ವಶದಿಂದ ಮಟ್ಕಾ ಜುಗಾರಿ ಆಟಕ್ಕೆ ಸಂಗ್ರಹಿಸಿದ ನಗದು ಹಣ ರೂ 1050/- ಮತ್ತು ಮಟ್ಕಾ ನಂಬ್ರ ಬರೆದ ಚೀಟಿ- 1, ಬಾಲ್ಪೆನ್ ಅನ್ನು ವಶ ಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ  ಕಲಂ: 78(Ⅲ) KP act ರಂತೆ ಪ್ರಕರಣ ದಾಖಲಾಗಿದೆ.‌

error: No Copying!