ದಿನಾಂಕ:06-09-2025(ಹಾಯ್ ಉಡುಪಿ ನ್ಯೂಸ್)
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಮಧ್ಯಪ್ರವೇಶಿಸುವಂತೆ ಕುರಿತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಮಹಿಳಾ ಸಂಘಟನೆಗಳು ಪತ್ರ ಬರೆದಿವೆ.
ಸುಮಾರು 10 ಮಹಿಳಾ ಸಂಘಟನೆಗಳು ಹಾಗೂ 40 ಸಾಮಾಜಿಕ ಹೋರಾಟಗಾರ್ತಿಯರು ಪತ್ರ ಬರೆದಿದ್ದು, ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಎಸ್‌ಐಟಿ ತನಿಖೆಯ ಬೆಳವಣಿಗೆ ಬಗ್ಗೆ ಮಹಿಳಾ ಸಂಘಟನೆಗಳು ತೀವ್ರ ಆತಂಕ ಹೊರಹಾಕಿವೆ. ಅಲ್ಲದೇ ಮಾಸ್ಕ್ ಮ್ಯಾನ್ ಚಿನ್ನಯ್ಯನ ಬಂಧನ, ಸುಜಾತ ಭಟ್ ಪ್ರಕರಣ, ತನಿಖೆ ಕುರಿತ ಮಾಧ್ಯಮ ವರದಿಗಳು ಹಾಗೂ ಡಿಸಿಎಂ ಡಿಕೆಶಿ ಬಗ್ಗೆಯೂ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ಪ್ರಮುಖವಾಗಿ ವೇದವಲ್ಲಿ ಪ್ರಕರಣ, ಸೌಜನ್ಯ ಪ್ರಕರಣ ಹಾಗೂ ಪದ್ಮಲತಾ ಸಾವಿನ ತನಿಖೆ ಆಗಬೇಕು. ಇವರನ್ನು ಕೊಂದವರು ಯಾರು ಎಂಬ ಸತ್ಯ ತಿಳಿಯಬೇಕು ಎಂದು ಮನವಿಯಲ್ಲಿ ಹೇಳಿದ್ದಾರೆ.
