ದಿನಾಂಕ:06-09-2025(ಹಾಯ್ ಉಡುಪಿ ನ್ಯೂಸ್)
ಜಾರಿ ನಿರ್ದೇಶನಾಲಯ (ED) ಬಂಧಿಸಿದ ನಂತರ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ತಮ್ಮ ಬೆಂಬಲಿಗರ ವಿರುದ್ಧ ದಾಖಲಾಗಿರುವ ಪ್ರಕರಣಗಳು ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳನ್ನು ಹಿಂತೆಗೆದುಕೊಳ್ಳುವ ರಾಜ್ಯ ಸರ್ಕಾರದ ನಿರ್ಧಾರವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಮರ್ಥಿಸಿಕೊಂಡಿದ್ದಾರೆ. ‘ರೈತರು, ಭಾಷೆ ಮತ್ತು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದವರ ವಿರುದ್ಧದ ಹಲವಾರು ಪ್ರಕರಣಗಳನ್ನು ಹಿಂಪಡೆಯಲಾಗಿದೆ. ಬಿಜೆಪಿ ಕೋರಿಕೆ ಮೇರೆಗೆ ನಾವು ಹಲವು ಪ್ರಕರಣಗಳನ್ನು ಹಿಂತೆಗೆದುಕೊಂಡಿದ್ದೇವೆ ಎಂದರು.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 60 ಪ್ರಕರಣಗಳನ್ನು ಹಿಂಪಡೆಯಲು ಅನುಮೋದನೆ ನೀಡಿತ್ತು. ಅದರಂತೆ ಬಿಜೆಪಿ, ಕಾಂಗ್ರೆಸ್ ಸದಸ್ಯರು, ಕಾರ್ಯಕರ್ತರು, ರೈತ ಮುಖಂಡರು, ವಿದ್ಯಾರ್ಥಿಗಳು ಮತ್ತು ವಿವಿಧ ಸಂಘಟನೆಯ ಕನ್ನಡ ಕಾರ್ಯಕರ್ತರು ಸೇರಿದಂತೆ ಹಲವರ ಮೇಲಿನ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂತೆಗೆದುಕೊಳ್ಳಲಿದೆ.
