ಮಣಿಪಾಲ: ದಿನಾಂಕ:07-09-2025(ಹಾಯ್ ಉಡುಪಿ ನ್ಯೂಸ್) ಹಯಗ್ರೀವ ನಗರದ ಸುವಿಧ ಹೋಮ್ಸ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಅಮಲಿನಲ್ಲಿದ್ದ ಯುವಕನನ್ನು ಮಣಿಪಾಲ ಪೊಲೀಸ್ ಠಾಣೆಯ ಎಎಸ್ಐ ಶೀನ ಸಾಲ್ಯಾನ್ ಅವರು ಬಂಧಿಸಿದ್ದಾರೆ.
ಮಣಿಪಾಲ ಪೊಲೀಸ್ ಠಾಣೆಯ ಎಎಸ್ಐ ಶೀನ ಸಾಲ್ಯಾನ್, ರವರು ದಿನಾಂಕ : 18-08-2025 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಹಯಗ್ರೀವ ನಗರದ ಸುವಿಧ ಹೋಮ್ಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ Adnan Ibrahim (20) Premier park Syndicate circle Manipal ಎಂಬವನು ಅಮಲಿನಲ್ಲಿದ್ದು, ಆತ ಮಾದಕ ವಸ್ತು ಗಾಂಜಾ ಸೇವನೆ ಮಾಡಿರುವ ಅನುಮಾನದ ಮೇರೆಗೆ ಆತನನ್ನು ಬಂಧಿಸಿ ವಶಕ್ಕೆ ಪಡೆದು ಅದೇ ದಿನ ಗಾಂಜಾ ಸೇವನೆ ಮಾಡಿದ ಕುರಿತು ಪರೀಕ್ಷೆ ನಡೆಸುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದಾರೆ .
ದಿನಾಂಕ:05/09/2025 ರಂದು ಆರೋಪಿಯು ಮಾದಕ ವಸ್ತು ಗಾಂಜಾವನ್ನು ಸೇವಿಸಿರುವ ಬಗ್ಗೆ ಮಣಿಪಾಲ ಕೆ ಎಂ ಸಿ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಗಳು ದೃಢಪತ್ರವನ್ನು ನೀಡಿದ್ದಾರೆ.
ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಕಲಂ: ಕಲಂ 27 (b) NDPS ACT ರಂತೆ ಪ್ರಕರಣ ದಾಖಲಾಗಿದೆ.
