images-9.jpeg
Spread the love

ಬ್ರಹ್ಮಾವರ: ದಿನಾಂಕ :10/09/2025(ಹಾಯ್ ಉಡುಪಿ ನ್ಯೂಸ್) ಹಾವಂಜೆ ಗ್ರಾಮದ ಮುಗ್ಗೇರಿ ಎಂಬಲ್ಲಿನ ಸರಕಾರಿ ಹಾಡಿಯಲ್ಲಿ ಕೋಳಿ ಅಂಕ ಜುಗಾರಿ ನಡೆಯುತ್ತಿದ್ದ ಸ್ಥಳಕ್ಕೆ ಬ್ರಹ್ಮಾವರ ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಸುದರ್ಶನ ದೊಡಮನಿ ಅವರು ದಾಳಿ ನಡೆಸಿ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಬ್ರಹ್ಮಾವರ ಪೊಲೀಸ್ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಸುದರ್ಶನ ದೊಡಮನಿ ಅವರು ದಿನಾಂಕ:09-09-2025 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಹಾವಂಜೆ ಗ್ರಾಮದ ಮುಗ್ಗೇರಿ ಎಂಬಲ್ಲಿನ ಸರಕಾರಿ ಹಾಡಿಯಲ್ಲಿ ಕೆಲವು ಜನರು ಸೇರಿಕೊಂಡು ಹಿಂಸಾತ್ಮಕವಾಗಿ ಕೋಳಿಗಳ ಕಾಲಿಗೆ ಕತ್ತಿಯನ್ನು ಕಟ್ಟಿ ಕೋಳಿ ಅಂಕವನ್ನು ಆಡುತ್ತಿದ್ದಾರೆ ಎಂಬುದಾಗಿ ಬಂದ ಸಾರ್ವಜನಿಕ ಮಾಹಿತಿಯಂತೆ ಕೂಡಲೇ ಸ್ಥಳಕ್ಕೆ ದಾಳಿ ನಡೆಸಿದ್ದಾರೆ .

ದಾಳಿ ನಡೆಸಿದಾಗ ಸ್ಥಳದಲ್ಲಿ KA-20-EZ-1041 ನೇ ಸ್ಕೂಟರ್, KA-18-EE-667 ಮೋಟರ್ ಸೈಕಲ್, KA-20-ER-3689 ಮೋಟರ್ ಸೈಕಲ್, MH-02-AN-7348 ಮೋಟರ್ ಸೈಕಲ್ ಬಿಟ್ಟು ಜನರು ಓಡಿಹೋಗಿದ್ದು, ಆರೋಪಿತರು ಆಟಕ್ಕೆ ಬಳಸಿದ 3 ಕೋಳಿಗಳು, ಕೋಳಿಗಳ ಕಾಲಿಗೆ ಕಟ್ಟಿದ 2 ಕೋಳಿ ಬಾಳ್, ಕೋಳಿಯ ಕಾಲಿಗೆ ಕಟ್ಟಿದ 2 ನೈಲಾನ್ ಹಗ್ಗ ಹಾಗೂ 04 ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ   ಕಲಂ: 11 Prevention of Cruelty to Animals Act ರಂತೆ ಪ್ರಕರಣ ದಾಖಲಾಗಿದೆ.

error: No Copying!