ದಿನಾಂಕ:10-09-2025(ಹಾಯ್ ಉಡುಪಿ ನ್ಯೂಸ್)
ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿ ಕಾರ್ಯಚರಿಸುತ್ತಿದ್ದ ಆರೋಮಾಝೆನ್ ಸುಗಂಧ ದ್ರವ್ಯ ತಯಾರಿಕಾ ಕಂಪೆನಿಯಲ್ಲಿ ಇಂದು ಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ಕಂಪನಿ ಸಂಪೂರ್ಣ ಸುಟ್ಟುಕರಕಲಾಗಿದೆ. ಅದೃಷ್ಟವಶಾತ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದ್ದು, ಅಪಾರ ನಷ್ಟ ಸಂಭವಿಸಿದೆ. ಅಗ್ನಿ ಅವಘಡದ ಕುರಿತು ಮಾಹಿತಿ ಸಿಗುತ್ತಿದ್ದಂತೆ ಎಂಸಿಎಫ್, ಎನ್‌ಎಂ ಪಿಎ, ಮತ್ತು ಕದ್ರಿಯ ಅಗ್ನಿ ಶಾಮಕ ದಳ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸಿವೆ.
