IMG_20250911_000749.jpg
Spread the love

ದಿನಾಂಕ:11-09-2025(ಹಾಯ್ ಉಡುಪಿ ನ್ಯೂಸ್)

ಮದ್ದೂರು: ಕಳೆದ ಭಾನುವಾರ ಗಣೇಶ ವಿಸರ್ಜನೆ ಮೆರವಣಿಗೆ ಮೇಲೆ ಕಲ್ಲು ತೂರಾಟದ ನಂತರ ಬೂದಿ ಮುಚ್ಚಿದ ಕೆಂಡದಂತಿರುವ ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಹಿಂದೂಪರ ಸಂಘಟನೆಗಳು  ನಿನ್ನೆ ಅದ್ಧೂರಿ ಸಾಮೂಹಿಕ ಗಣಪತಿ ವಿಸರ್ಜನಾ ಮೆರವಣಿಗೆ ನಡೆಸಿದವು.

ಭಾರೀ ಬಿಗಿ ಭದ್ರತೆ ನಡುವೆ ಮದ್ದೂರಿನ ಹತ್ತು ಹಾಗೂ ಸುತ್ತಮುತ್ತಲಿನ ಗ್ರಾಮಗಳ 18 ಗಣಪತಿ ಸೇರಿದಂತೆ ಒಟ್ಟು 28 ಗಣಪತಿ ಮೂರ್ತಿಗಳನ್ನು ವಿಸರ್ಜನೆ ಮಾಡಿ ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶಿಸಿದವು. 11.45ಕ್ಕೆ ಮದ್ದೂರು ಪಟ್ಟಣದ ಕಾಶಿ ವಿಶ್ವನಾಥ ದೇವಸ್ಥಾನದಿಂದ ಮೆರವಣಿಗೆ ಆರಂಭವಾಗಿ ಹೊಳೆಬೀದಿ, ಪೇಟೆ ಬೀದಿ, ಟಿಬಿ ಸರ್ಕಲ್‌, ಹಳೆ ಬೆಂಗಳೂರು-ಮೈಸೂರು ರಸ್ತೆಯಲ್ಲಿ ಮೂರು ಕಿಲೋ ಮೀಟರ್‌ ಸಂಚರಿಸಿ ಕೊಲ್ಲಿ ಸರ್ಕಲ್‌ ಮೂಲಕ ಆಗಮಿಸಿ ಶಿಂಷಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ಗಣಪತಿ ವಿಸರ್ಜನೆಯಲ್ಲಿ ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಸಂಸದ ಯದುವೀರ್‌ ಒಡೆಯರ್‌ ಭಾಗವಹಿಸಿದ್ದರು.

error: No Copying!