images.jpeg
Spread the love

ದಿನಾಂಕ:12-09-2025(ಹಾಯ್ ಉಡುಪಿ ನ್ಯೂಸ್)

ಶಾಲೆಯ ಹಾಸ್ಟೆಲ್‌ನಲ್ಲಿ 10 ನೇ ತರಗತಿಯ ವಿದ್ಯಾರ್ಥಿಯೊಬ್ಬನಿಗೆ Raging ಮಾಡಿದ ಆರೋಪದ ಮೇಲೆ ಐವರು ಪಿಯುಸಿ ವಿದ್ಯಾರ್ಥಿಗಳು, ಶಾಲೆಯ ಪ್ರಾಂಶುಪಾಲ ಮತ್ತು ಹಾಸ್ಟೆಲ್ ವಾರ್ಡನ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿತ್ತು. 

ಈ ಕುರಿತು ಸಂತ್ರಸ್ತ ಬಾಲಕ ಪ್ರಾಂಶುಪಾಲರಿಗೆ ದೂರು ನೀಡಿದ್ದರೂ ಪ್ರಾಂಶುಪಾಲರಾಗಲೀ, ವಾರ್ಡನ್ ಆಗಲೀ ಯಾವುದೇ ಕ್ರಮಕೈಗೊಂಡಿಲ್ಲ. ಅಲ್ಲದೆ ದೂರು ನೀಡಿದ್ದಕ್ಕೆ ಕೋಪಗೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದು. ಕಬ್ಬಿಣದ ಹ್ಯಾಂಗರ್ ನಿಂದ ಹಲ್ಲೆ ನಡೆಸಿದ್ದಾರೆ. ಹೀಗಾಗಿ ಸಂತ್ರಸ್ತ ವಿದ್ಯಾರ್ಥಿಯ ತಂದೆ ಬನ್ನೇರುಘಟ್ಟ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಚುರುಕುಗೊಳಿಸಿರುವ ಪೊಲೀಸರು ವಿದ್ಯಾರ್ಥಿಗಳ ವಿಚಾರಣೆ ನಡೆಸುತ್ತಿದ್ದಾರೆ.

error: No Copying!