IMG_20250913_144047.jpg
Spread the love

ಕುಂಧಾಪುರ: ದಿನಾಂಕ :13/09/2025 (ಹಾಯ್ ಉಡುಪಿ ನ್ಯೂಸ್) ಕುಂಭಾಶಿ ಜಂಕ್ಷನ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಅಮಲಿನಲ್ಲಿ ತೂರಾಡುತ್ತಿದ್ದ  ಯುವಕನನ್ನು ಕುಂದಾಪುರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ ಶಾಂತರಾಜ್ ಅವರು ಬಂಧಿಸಿದ್ದಾರೆ.

ಕುಂದಾಪುರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪನಿರೀಕ್ಷಕರಾದ  ಶಾಂತರಾಜ್‌  ಅವರು ಹಾಗೂ ಸಿಬ್ಬಂದಿರವರು ದಿನಾಂಕ:12-09-2025 ರಂದು ಹಗಲು ರೌಂಡ್ಸ್‌ ಕರ್ತವ್ಯದಲ್ಲಿದ್ದಾಗ ಮಧ್ಯಾಹ್ನ  ಸಮಯಕ್ಕೆ ಕುಂದಾಪುರ ತಾಲೂಕು ಕುಂಭಾಶಿ ಗ್ರಾಮದ ಕುಂಭಾಶಿ ಜಂಕ್ಷನ್‌ ಬಳಿ ಓರ್ವ ವ್ಯಕ್ತಿ ಸಾರ್ವಜನಿಕ ಸ್ಥಳದಲ್ಲಿ ತೂರಾಡಿಕೊಂಡು ಅಮಲಿನಲ್ಲಿರುವುದು ಕಂಡುಬಂದಿದ್ದು, ಆತನನ್ನು ಪೊಲೀಸರು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಆತನು ಮಾದಕ ವಸ್ತು ಸೇವನೆ ಮಾಡಿರುವ ಅನುಮಾನ ಬಂದ ಮೇರೆಗೆ ಆತನನ್ನು ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಆತನನ್ನು ಠಾಣೆಗೆ ಕರೆದುಕೊಂಡು ಬಂದು ಆತನ ಹೆಸರು ವಿಳಾಸ ವಿಚಾರಣೆ ನಡೆಸಿದಾಗ ತನ್ನ ಹೆಸರು ದೀಕ್ಷಿತ್ (23) ಉಗ್ರಾಣಿ ಬೆಟ್ಟು ಕುಂಭಾಶಿ ಕುಂದಾಪುರ ಎಂಬುದಾಗಿ ತಿಳಿಸಿರುತ್ತಾನೆ. ದೀಕ್ಷಿತ್ ನನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸುವ ಬಗ್ಗೆ ಕುಂದಾಪುರ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು, ಆತನನ್ನು ಪರೀಕ್ಷಿಸಿದ ವೈದ್ಯರು ಆತ TETRAHYDROCANNABINOL ಎಂಬ ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿರುವುದಾಗಿ ವರದಿ ನೀಡಿರುತ್ತಾರೆ.

ಈ ಬಗ್ಗೆ ಕುಂದಾಪುರ ಪೊಲೀಸ್‌ ಠಾಣೆಯಲ್ಲಿ  ಕಲಂ:27(b) NDPS Act ರಂತೆ ಪ್ರಕರಣ ದಾಖಲಾಗಿದೆ.

error: No Copying!