images-4.jpeg
Spread the love

ದಿನಾಂಕ:16-09-2025(ಹಾಯ್ ಉಡುಪಿ ನ್ಯೂಸ್)

ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರವನ್ನು ಪ್ರತಿನಿಧಿಸುವ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಹೇಳಿರುವ ಕರ್ನಾಟಕ ಹೈಕೋರ್ಟ್, 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಲಾವಣೆಯಾದ ಮತಗಳ ಮರುಎಣಿಕೆಗೆ ಮಂಗಳವಾರ ಆದೇಶಿಸಿದೆ.

ನಂಜೇಗೌಡ ವಿರುದ್ಧ ಸೋತಿದ್ದ ಬಿಜೆಪಿಯ ಕೆಎಸ್ ಮಂಜುನಾಥ್ ಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್ ದೇವದಾಸ್ ನೇತೃತ್ವದ ಪೀಠ ಈ ತೀರ್ಪು ನೀಡಿದೆ. ಮತ ಎಣಿಕೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಸುಮಾರು ಎರಡು ವರ್ಷಗಳ ವಿಚಾರಣೆಯ ನಂತರ, ನ್ಯಾಯಾಲಯವು ಮರುಎಣಿಕೆ ಮಾಡುವಂತೆ ಆದೇಶಿಸಿ, ನಂಜೇಗೌಡ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿದೆ.

error: No Copying!