gettyimages-2160766162-612x612.jpg
Spread the love

ಕಾರ್ಕಳ: ದಿನಾಂಕ 19/09/2025(ಹಾಯ್ ಉಡುಪಿ ನ್ಯೂಸ್) ಬೆಳ್ಮಣ್ ಚರ್ಚ್ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಆನ್ ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ವ್ಯಕ್ತಿ ಯನ್ನು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಮ್ ಎಸ್ ಅವರು ಬಂಧಿಸಿದ್ದಾರೆ.

ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಮ್ ಎಸ್  ಅವರಿಗೆ ದಿನಾಂಕ : 18-09-2025 ರಂದು ದೊರೆತ ಸಾರ್ವಜನಿಕ ಮಾಹಿತಿಯಂತೆ ಸಿಬ್ಬಂದಿಯವರೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ದಾಳಿ ನಡೆಸಿ ಅಪಾದಿತ ನಜೀರ್ ಎಂಬಾತನನ್ನು ಕಾರ್ಕಳ ತಾಲೂಕು ಬೆಳ್ಮಣ್ ಗ್ರಾಮದ ಬೆಳ್ಮಣ್ ಚರ್ಚ್‌ ಬಳಿ ಬಂಧಿಸಿ ವಶಕ್ಕೆ ಪಡೆದುಕೊಂಡಿದ್ದಾರೆ .

ನಜೀರ್ ನನ್ನು ವಿಚಾರಣೆ ನಡೆಸಿದಾಗ ಆತನು  ಆನ್‌ಲೈನ್ ಮೂಲಕ M.yolo247.site/login ಎಂಬ ಸೈಟ್‌ನಲ್ಲಿ ಬೆಟ್ಟಿಂಗ್ ಆಪ್‌ ಮೂಲಕ ಆನ್‌ಲೈನ್ ಬೆಟ್ಟಿಂಗ್ ಮಾಡುತ್ತಿರುವುದು ಕಂಡುಬಂದಿದ್ದು ಅಪಾದಿತನ ವಶದಲ್ಲಿದ್ದ ಇಂಡಿಯನ್ ಓವರ್ ಸೀಸ್ ಬ್ಯಾಂಕಿನ 5 ಡೆಬಿಟ್ ಕಾರ್ಡ್ ಗಳು ಮತ್ತು ಕೆನರಾ ಬ್ಯಾಂಕಿನ 1 ಡೆಬಿಟ್ ಕಾರ್ಡ್ , ಸ್ಯಾಮ್‌ಸಂಗ್ ಮೊಬೈಲ್ ಫೋನ್ ಮತ್ತು ನಗದು ರೂಪಾಯಿ 30,000/ ನ್ನು ಸ್ವಾಧೀನಪಡಿಸಿಕೊಂಡಿದ್ದು ಅಪಾದಿತ ನಜೀರನು ಇತರರೊಂದಿಗೆ  ಸೇರಿ ಕೊಂಡು ಆನ್‌ಲೈನ್ ಮೂಲಕ ಬೆಟ್ಟಿಂಗ್ ವ್ಯವಹಾರ ಮಾಡುತ್ತಿದ್ದ ಎಂದು ದೂರು ನೀಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ  ಕಲಂ: 78 (i)(iii) ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಕಲಂ: 112(1) BNS ರಂತೆ ಪ್ರಕರಣ ದಾಖಲಾಗಿದೆ.

error: No Copying!