ದಿನಾಂಕ:21-09-2025(ಹಾಯ್ ಉಡುಪಿ ನ್ಯೂಸ್)ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನುತೋರಿಸುವ ಕಾಲಮ್ ನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರ್ಕಾರದ ಬಹು ನಿರೀಕ್ಷಿತ ಜಾತಿ ಗಣತಿ ಸೋಮವಾರದಿಂದ ಆರಂಭವಾಗಲಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನುತೋರಿಸುವ ಕಾಲಮ್ ಅನ್ನು ತೆಗೆದುಹಾಕಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಾಧ್ಯಮ ಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಈ ವಿಷಯದಲ್ಲಿ “ರಾಜಕೀಯ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ. ಹಿಂದುಳಿದ ವರ್ಗಗಳ ಆಯೋಗವು ಶಾಸನಬದ್ಧ ಸಂಸ್ಥೆಯಾಗಿದ್ದು, ಸಮೀಕ್ಷೆ ನಡೆಸಲು ಮಾರ್ಗಸೂಚಿಗಳನ್ನಷ್ಟೇ ಸರ್ಕಾರ ನೀಡಿದೆ. ಸ್ವತಃ ಆಯೋಗವೇ ಕ್ರಿಶ್ಚಿಯನ್ ಧರ್ಮದಡಿ ವಿವಿಧ ಜಾತಿಗಳ ಉಲ್ಲೇಖವನ್ನು ತೋರಿಸುವ ಕಾಲಮ್ ಅನ್ನು ತೆಗೆದುಹಾಕಿದೆ ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ.
ನಾಳೆಯಿಂದ ಪ್ಲಾನ್ ಮಾಡಿದಂತೆ ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಆರಂಭಗೊಳ್ಳಲಿದ್ದು, ಸರ್ವೆ ಕಾರ್ಯಕ್ಕೆ ತೆರಳಿದಾಗ ಮೊಬೈಲ್ ಆಪ್ ಮೂಲಕ ಮಾಹಿತಿ ಸಂಗ್ರಹ ಮಾಡ್ತಾರೆ. ಆಧಾರ್ ನಂಬರ್, ಆಧಾರ್ ಕಾರ್ಡ್‌ಗಳ ಅವಶ್ಯಕತೆ ಇದೆ. ಪಡಿತರ ಕಾರ್ಡ್‌ಗಳಲ್ಲಿನ ಮಾಹಿತಿ ನಮ್ಮ ಸಿಸ್ಟಮ್‌ನಲ್ಲೂ ಲಭ್ಯವಿರುತ್ತೆ. ಇದರಿಂದ ಕುಟುಂಬದ ಸದಸ್ಯರ ಮಾಹಿತಿ ಬೇಗ ಲಭ್ಯವಾಗುತ್ತೆ. ಪಡಿತರ ಚೀಟಿ ಇಲ್ಲದಿದ್ದರೆ ಆಧಾರ್ ಕಾರ್ಡ್ ಕಡ್ಡಾಯ ಆಗಲಿದೆ ಎಂದು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ನಾಯ್ಕ್ ಹೇಳಿದ್ದಾರೆ.
