IMG_20250921_233601.jpg
Spread the love

ದಿನಾಂಕ:21-09-2025(ಹಾಯ್ ಉಡುಪಿ ನ್ಯೂಸ್)

ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ನಿರ್ಧರಿಸಿದೆ.

ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಹೇಳಿದ್ದಾರೆ. ಇಂದು ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೆವು ಎಂದು ನೀಲಕಂಠ ಅಸೂಟಿ ಹೇಳಿದ್ದಾರೆ.

error: No Copying!