ದಿನಾಂಕ:23-09-2025(ಹಾಯ್ ಉಡುಪಿ ನ್ಯೂಸ್)
ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ. ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಇಂದು ಬೆಳಗ್ಗೆ 10.10 ರಿಂದ 10.40 ರ ನಡುವಿನ ವೃಶ್ಚಿಕ ಲಗ್ನ ಮುಹೂರ್ತದಲ್ಲಿ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ನಾಡಹಬ್ಬ ದಸರಾಕ್ಕೆ ಚಾಲನೆ ನೀಡಿದರು. ಇದಕ್ಕೂ ಮುನ್ನ ಬಾನು ಮುಷ್ತಾಕ್, ಮುಖ್ಯಮಂತ್ರಿ ಮತ್ತು ಇತರ ಗಣ್ಯರೊಂದಿಗೆ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಹಿತಿ ಬಾನು ಮುಷ್ತಾಕ್ ಅವರು ಹುಟ್ಟಿನಿಂದ ಮುಸಲ್ಮಾನರು, ಆದರೆ ಎಲ್ಲಕ್ಕಿಂತ ಮುಖ್ಯವಾಗಿ ಅವರು ಮನುಷ್ಯರು, ಈ ದೇಶದ ಸಂವಿಧಾನದ ಮೇಲೆ ನಂಬಿಕೆ ಇರುವವರು ಅವರು ದಸರಾ ಉದ್ಘಾಟನೆಗೆ ವಿರೋಧ ವ್ಯಕ್ತಪಡಿಸಲಿಲ್ಲ.
ಅಂತಾರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿಯನ್ನು ನಮ್ಮ ಕನ್ನಡ ಸಾಹಿತ್ಯಕ್ಕೆ ತಂದುಕೊಟ್ಟಿದ್ದಾರೆ. ಅವರು ದಸರಾ ಉದ್ಘಾಟಿಸಿರುವುದು ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ.
