ದಿನಾಂಕ:24-09-2025(ಹಾಯ್ ಉಡುಪಿ ನ್ಯೂಸ್)
ಐಟಿ ಸಿಟಿ ಬೆಂಗಳೂರಿನ ಬಹುತೇಕ ರಸ್ತೆಗಳು ಹೊಂಡ ಗುಂಡಿ ಬಿದ್ದು ತೀವ್ರ ಹದಗೆಟ್ಟು ಹೋಗಿದೆ. ಈ ಬಗ್ಗೆ ಸರ್ಕಾರದ ಗಮನ ಸೆಳೆಯಲು ವಿರೋಧ ಪಕ್ಷ ಬಿಜೆಪಿ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ರಸ್ತೆಗಳ ದುಃಸ್ಥಿತಿ ಮತ್ತು ಗುಂಡಿಗಳ ಹಾವಳಿಯ ಕುರಿತು ರಸ್ತೆತಡೆ ನಡೆಸಿ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲಿ ಬಿಜೆಪಿ ನಾಯಕರು ಗುಂಡಿಗಳನ್ನು ಮುಚ್ಚುವ ಮೂಲಕ ಪ್ರತಿಭಟನೆ ನಡೆಸಿದರೆ, ರಾಜ್ಯದ ಇತರ ಭಾಗಗಳಲ್ಲಿ ‘ರಸ್ತೆ ತಡೆ’ ಪ್ರತಿಭಟನೆಗಳು ಮಾಡಿದ್ದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಪ್ರತಿಭಟನೆಗಳಿಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ ಶಿವಕುಮಾರ್, ಬೆಂಗಳೂರಿನ ಹದಗೆಟ್ಟ ರಸ್ತೆಗುಂಡಿಗಳಿಗೆ ಹಿಂದಿನ ಬಿಜೆಪಿ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ. ಬೆಂಗಳೂರಿನಾದ್ಯಂತ ಪ್ರತಿದಿನ ಸುಮಾರು 1,000 ಗುಂಡಿಗಳನ್ನು ಸಂಘಟಿತ ಪ್ರಯತ್ನಗಳ ಮೂಲಕ ಮುಚ್ಚಲಾಗುತ್ತಿದೆ. ಆದರೆ ಬಿಜೆಪಿ ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
