IMG_20250924_234456.jpg
Spread the love

ದಿನಾಂಕ:24-09-2025(ಹಾಯ್ ಉಡುಪಿ ನ್ಯೂಸ್)

ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು 21 ವಿದ್ಯಾರ್ಥಿಗಳಿಗೆ ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿದ ಆರೋಪದ ಮೇಲೆ ಇಬ್ಬರು ಸರ್ಕಾರಿ ವೈದ್ಯರು ಸೇರಿ ಐವರನ್ನು ಮಲ್ಲೇಶ್ವರಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಶಿಕ್ಷಕ ಭರ್ಮಪ್ಪ ಕೆಬಿ, ಕೊಪ್ಪಳ ಮೂಲದ ಡಿಜೆ ಸುಧಾಕರ್, ಹೊಸಪೇಟೆಯ ಎಫ್‌ಡಿಎ ಉಮೇಶ್ ನಾಗಪ್ಪ ಚೌಧರಿ, ಆಡಳಿತ ವೈದ್ಯಾಧಿಕಾರಿ ಡಾ. ಹರಿಪ್ರಸಾದ್ ಮತ್ತು ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯ ಮಕ್ಕಳ ತಜ್ಞ ಡಾ. ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಆರೋಪಿಗಳು ಪ್ರಮಾಣಪತ್ರಗಳನ್ನು ನೀಡಲು ಅವರು ಪ್ರತಿ ಅಭ್ಯರ್ಥಿಗೆ 5-10 ಲಕ್ಷ ರೂ. ಶುಲ್ಕ ವಿಧಿಸಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ಕೆಇಎ ಆಡಳಿತ ಅಧಿಕಾರಿಯೊಬ್ಬರು ಸೆಪ್ಟೆಂಬರ್ 8 ರಂದು 21 ವಿದ್ಯಾರ್ಥಿಗಳು ಸೇರಿದಂತೆ 24 ಜನರ ವಿರುದ್ಧ ದೂರು ದಾಖಲಿಸಿದ್ದರು.

error: No Copying!