ದಿನಾಂಕ:26-09-2025(ಹಾಯ್ ಉಡುಪಿ ನ್ಯೂಸ್)
ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಗಣ್ಯರು ಅಗಲಿದ ಸಾಹಿತಿಗೆ ಕಣ್ಣೀರಿನ ವಿದಾಯ ಹೇಳಿದರು.
ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು. ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಸಾಹಿತಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ ಮುಂತಾದವರು ಭೈರಪ್ಪಗೆ ಅಂತಿಮ ನಮನ ಸಲ್ಲಿಸಿದರು.
