IMG-20241220-WA0005.jpg
Spread the love

ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಎಷ್ಟು ಕಟ್ಟಡಗಳಿಗೆ ನೋಟಿಸ್ ನೀಡಿದ್ದೀರಿ ? ಏನು ಕ್ರಮ ಕೈಗೊಂಡಿದ್ದೀರಿ ಎಂದು ನಗರಸಭೆಯ ಸಾಮಾನ್ಯ ಸಭೆಯಲ್ಲಿ ಸುರೇಶ್ ಶೆಟ್ಟಿ ಬನ್ನಂಜೆ ಪ್ರಶ್ನೆ ಮಾಡಿದ್ದಾರೆ.

ಉಡುಪಿ: ದಿನಾಂಕ:01-10-2025(ಹಾಯ್ ಉಡುಪಿ ನ್ಯೂಸ್)

ಗರಸಭೆಯ ಸಾಮಾನ್ಯ ಸಭೆಯಲ್ಲಿ ನಗರಸಭಾ ಸದಸ್ಯರಾದ ಶ್ರೀ ಸುರೇಶ್ ಶೆಟ್ಟಿ ಬನ್ನಂಜೆ ಅವರು  ಮಾತನಾಡುತ್ತಾ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಪಾರ್ಕಿಂಗ್ ಸಮಸ್ಯೆ ಬಗ್ಗೆ  ಪತ್ರಿಕೆಗಳಲ್ಲಿ ನಿರಂತರವಾಗಿ ಬರುತ್ತಿದ್ದು ,ಈ ಸಮಸ್ಯೆಯನ್ನು ಪರಿಹರಿಸಲು ಮಾನ್ಯ ಜಿಲ್ಲಾಧಿಕಾರಿಯವರು ಪಾರ್ಕಿಂಗ್ ವ್ಯವಸ್ಥೆ ಇಲ್ಲದ ಉಡುಪಿ ನಗರಸಭಾ ವ್ಯಾಪ್ತಿಯ 58 ಕಟ್ಟಡಗಳಿಗೆ ನೋಟಿಸ್ ಅನ್ನು ನೀಡಲು ಉಡುಪಿ ನಗರಸಭೆಗೆ ಆದೇಶಿಸಿದ್ದು ,ಈ ಬಗ್ಗೆ  ಎಷ್ಟು ಕಟ್ಟಡಗಳಿಗೆ ನೋಟಿಸ್ ಜಾರಿಗೊಳಿಸಲಾಯಿತು
ಎಂದು ಸುರೇಶ್ ಶೆಟ್ಟಿ ಬನ್ನಂಜೆ ಪ್ರಶ್ನಿಸಿದ್ದಾರೆ .

ಅಕ್ರಮ ಕಟ್ಟಡಗಳು ಯಾವುದು ಎಂಬುದನ್ನು ಸಭೆಗೆ ತಿಳಿಸಬೇಕು ಎಂದು ಸಭೆಯಲ್ಲಿ ಒತ್ತಾಯಿಸಿದರು .ಅಕ್ರಮ ಕಟ್ಟಡಗಳ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

error: No Copying!