ದಿನಾಂಕ:02-10-2025(ಹಾಯ್ ಉಡುಪಿ ನ್ಯೂಸ್)
ದೇಶಾದ್ಯಂತ ಆರ್ ಎಸ್ಎಸ್ ಶತಮಾನೋತ್ಸವ ಕಾರ್ಯಕ್ರಮ ನಡೆಯುತ್ತಿದ್ದು, ಈ ಮಧ್ಯೆ ಆರ್ ಎಸ್ಎಸ್ ಬಗ್ಗೆ ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು ಆ ಸಂಘಟನೆಯು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ ಎಂದು ಹೇಳಿದ್ದಾರೆ. ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆ ಬಗ್ಗೆ ಕೇಳಿದಾಗ, ‘ಅವರು ಏನು ಬೇಕಾದರೂ ಮಾಡಲಿ. ಆದರೆ, ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ರೀತಿಯಲ್ಲಿ ಸಂಬಂಧ ಹೊಂದಿಲ್ಲ’ ಎಂದು ಹೇಳಿದ್ದಾರೆ.
