images-1.jpeg
Spread the love

ದಿನಾಂಕ :02-10-2025(ಹಾಯ್ ಉಡುಪಿ ನ್ಯೂಸ್)

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾಗಿರುವ ಶಕ್ತಿ ಯೋಜನೆ ಇಂಟರ್ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್ ಅವಾರ್ಡ್ ಗಿಟ್ಟಿಸಿಕೊಂಡಿದೆ.

ಕೆಎಸ್‌ಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ, ಬಿಎಂಟಿಸಿ ಬಸ್ ಗಳಲ್ಲಿ ಇಲ್ಲಿಯವರೆಗೂ 504 ಕೋಟಿ 90 ಲಕ್ಷ ಬಾರಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್‌ನಲ್ಲಿ ಸಂಚಾರ ಮಾಡಿರುವ ಹಿನ್ನೆಲೆಯಲ್ಲಿ ಶಕ್ತಿ ಯೋಜನೆ ವಿಶ್ವ ದಾಖಲೆಯ ಪಟ್ಟಿಗೆ ಸೇರ್ಪಡೆಯಾಗಿದೆ ಶಕ್ತಿ ಯೋಜನೆಯನ್ನು ಕಂಡ ದೇಶದ ವಿವಿಧ ರಾಜ್ಯಗಳು ಈ ಯೋಜನೆ ಜಾರಿ ತರಲು ಚಿಂತಿಸಿವೆ. ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

error: No Copying!